

ಶ್ರೀನಿವಾಸಪುರ: ವರದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ವಿಜಯದಶಮಿ ಪ್ರಯುಕ್ತ ಬನ್ನಿ ಮರದ ಪೂಜೆ ಏರ್ಪಡಿಸಲಾಗಿತ್ತು.
ತಹಶೀಲ್ದಾರ್ ಶಿರಿನ್ ತಾಜ್ ಬನ್ನಿ ಮರಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಬಳಿಕ, ಬಿಲ್ಲು ಹಿಡಿದು ಬಾಣ ಬಿಟ್ಟರು. ಅರ್ಚಕ ಸುಬ್ರಮಣಿ ಪೂಜಾ ವಿಧಿಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಹಾಗೂ ನಾಗರಿಕರ ವತಿಯಿಂದ ತಹಶೀಲ್ದಾರ್ ಶಿರಿನ್ ತಾಜ್ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಗ್ರಾಮ ಲೆಕ್ಕಾಧಿಕಾರಿಗಳಾದ ವಸುಂಧರಾದೇವಿ, ಮುರಳಿ, ನಾಗರಾಜ್, ಮುಖಂಡರಾದ ಗೋಪಿನಾಥರಾವ್, ಶ್ರೀನಿವಾಸ್. ಇರ್ಷಾದ್
ಇದ್ದರು.