

ಮುಂಬೈ: ಜಿಲ್ಲಾ ಪರಿಷತ್ ಚುನಾವಣೆಗೆ ಪ್ರಚಾರ ಸಭೆಗಳನ್ನು ಬಾರಾಮತಿಯಲ್ಲಿ ಆಯೋಜಿಸಲಾಗಿದ್ದರಿಂದ ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ಆ ವಿಮಾನ ಮಹಾರಾಷ್ಟ್ರದ ಬಾರಾಮತಿ ಬಳಿ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 5 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಅಜಿತ್ ಪರವಾರ್ ಸೇರಿದಂತೆ 5 ಸಿಬ್ಬಂದಿಯನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ ಏರ್ಕ್ರಾಫ್ಟ್ ಲ್ಯಾಂಡಿಂಗ್ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.
ಅಪಘಾತ ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ . ಬಾರಾಮತಿಯಲ್ಲಿ ಅಪಘಾತಕ್ಕೀಡಾದ ವಿಮಾನದ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನದಲ್ಲಿ ಇನ್ನೂ 2 ಸಿಬ್ಬಂದಿ (1 ಪಿಎಸ್ಒ ಮತ್ತು 1 ಅಟೆಂಡೆಂಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ ಎಂದು ಹೇಳಿದೆ.

