ಶ್ರೀನಿವಾಸಪುರ : ಬಸವಣ್ಣ ಅವರು ಶೈವ ಧರ್ಮದ ಭಕ್ತಿ ಚಳುವಳಿಯಲ್ಲಿ ಪ್ರಸಿದ್ದ ಸಂತರಾಗಿದ್ದರು. ಇವರು ರಾಜನೀತಿಜ್ಞರಾಗಿ ಮತ್ತು ಸಮಾಜ ಸುಧಾರಕರಾಗಿ ತಮ್ಮ ಕಾವ್ಯ ಮತ್ತು ಬರವಣಿಗೆಯ ಮೂಲಕ ಸಾರ್ವಜನಿಕರಲ್ಲಿ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಅವಿರತವಾಗಿ ಶ್ರಮಿಸಿದರು ಎಂದು ಹೇಳಿ ಬಸವಣ್ಣನವರ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಲು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸಲಹೆ ನೀಡಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಶುಕ್ರವಾರ ಬಸವ ಜಯಂತಿ ಅಂಗವಾಗಿ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಆರ್ಐ ಮುನಿರೆಡ್ಡಿ, ಸಮುದಾಯ ಮುಖಂಡ ವೀರಭದ್ರಸ್ವಾಮಿ, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಅಭಿಷೇಕ್ ಇದ್ದರು.