JANANUDI.COM NETWORK
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿμÉೀಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಆಟೋ ಪ್ರಚಾರದ ವಾಹನಕ್ಕೆ ಚಾಲನೆ ನೀಡುತ್ತಾ ಮಾತನಾಡಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿನ ಹೆತ್ತವರಿಗೆ ಮನ ಮುಟ್ಟುವಂತೆ ಬೀದಿ ನಾಟಕಗಳ ಮೂಲಕ ಅರಿವು ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಮತ್ತು ಆಟೋ ಪ್ರಚಾರದ ಮೂಲಕ ಹಾಗೂ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯಾದ್ಯಂತ 10 ದಿನ ನಡೆಸಲಾಗುವ ಈ ಆಟೋ ಪ್ರಚಾರ ಕಾರ್ಯಕ್ರಮವು ಸಾಧ್ಯವಾದಷ್ಟು ಎಲ್ಲಾ ಕಾಲೋನಿಗಳಿಗೆ ತಲುಪುವಂತೆ ಯೋಜನೆ ರೂಪಿಸ ಬೇಕು ಎಂದು ತಿಳಿಸಿದರು.