ಶ್ರೀನಿವಾಸಪುರ : ಯಾಂತ್ರೀಕೃತ ಜೀವನದಿಂದ ಪ್ರಸ್ತುತದ ದಿನಗಳಲ್ಲಿ ದೇಹ ದಂಡನೆ ಇಲ್ಲದೆ ಕೇವಲ ಬುದ್ದಿ ಶಕ್ತಿಗೆ ಮಾತ್ರ ಹೆಚ್ಚು ಶ್ರಮ ನೀಡುತ್ತಿರುವುದರಿಂದ ಮಾನಿಸಿಕ ಖಿನ್ನತೆ ಒಳಗಾಗುತ್ತಿದ್ದಾರೆ. ಆದ್ದರಿಂದ ದಿನನಿತ್ಯದ ಚಟುವಟಿಕೆಗಳಲ್ಲಿ ಕ್ರೀಡೆಯನ್ನು ಒಂದು ಭಾಗವನ್ನಾಗಿಸಿಕೊಳ್ಳುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆನೀಡಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀನಿವಾಸಪುರ ಹಾಗೂ ದೈಹಿಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಟಮಕ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ಗುಡ್ಡಗಾಡು ಸ್ಪರ್ಧೆಯ ಸಭಾಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಮೊಬೈಲ್, ಟಿವಿಗಳನ್ನು ನೋಡುವುದರ ಚಟ ಬಿಟ್ಟು , ವಿದ್ಯಾರ್ಥಿ ದಸೆಯಿಂದಲೇ ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಸಿ ಆರೋಗ್ಯಪೂರ್ಣ ಜೀವನ್ನು ನಡೆಸುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ದೈಹಿಕ ಮತ್ತು ಮಾನಸಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು ಹಾಗೂ ಆರೋಗ್ಯವೇ ನಮಗೆ ಸಂಪತ್ತು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಸಣ್ಣೀರಯ್ಯ ಅವರು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಚಟಕ್ಕೆ ಒಳಗಾಗುತ್ತಿದ್ದು. ಇದು ಮಾನಸಿಕ ಆರೋಗ್ಯಕ್ಕೆ ತೊಂದರೆಯನ್ನು ಉಂಟು ಮಾಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಬೇಕು.ಕ್ರೀಡೆಯು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ ಎಂದು ತಿಳಿಸಿದರು.
ಈ ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 43 ಕಾಲೇಜಿನ 200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಆರ್.ಶ್ರೀಕಾಂತ್ , ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಮುನಿರಾಜು, ಕ್ರೀಡಾ ಸಂಚಾಲಕರಾದ ಪ್ರೊ. ನವೀನ್ ಕುಮಾರ್, ಡಾ. ಎಚ್.ಮೃತ್ಯುಂಜಯ,ಡಾ.ಮಂಜುನಾಥ, ಡಾ. ಬಿ. ಪುಷ್ಪ, ಶ್ರೀದೇವಿ, ರತ್ನಮ್ಮ, ಶಾರದಮ್ಮ, ಇನ್ನಿತರ ಬೋಧಕ ವರ್ಗದವರು ಉಪಸ್ಥಿತರಿದ್ದರು.