JANANUDI.COM NETWORK
ಬೀಜಾಡಿ: ಗ್ರಾಮ ಪಂಚಾಯಿತಿ ಬೀಜಾಡಿ ಮತ್ತು ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇವರ ಜಂಟಿ ಆಶ್ರಯದಲ್ಲಿ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ ಬೀಜಾಡಿ ಗ್ರಾಮ ಪಂಚಾಯಿತಿ ವಠಾರದಲ್ಲಿ ಗುರುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಕೆ.ಎಸ್.ನಿಸಾರ್ ಅಹಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ, ಹಂಸಲೇಖ ಅವರ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.
ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ಮೊಗವೀರ, ಉಪಾಧ್ಯಕ್ಷೆ ವಿಜಯ ಕುಮಾರಿ,ಸದಸ್ಯರಾದ ವಾದಿರಾಜ್ ಹೆಬ್ಬಾರ್, ಚಂದ್ರ ಬಿ.ಎನ್, ಶೇಖರ್ ಚಾತ್ರಬೆಟ್ಟು ,ಅನಿಲ್ ಚಾತ್ರಬೆಟ್ಟು ,ಜೆಸಿಂತಾ, ಜೂಲಿ, ಗುಲಾಬಿಯಮ್ಮ ಹಾಗೂ ವಿವಿಧ ಸಂಘ ಸಂಸ್ಥೆಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಥಿ ಅಧಿಕಾರಿ ಗಣೇಶ್ ಸ್ವಾಗತಿಸಿದರು. ಸಿಬಂದಿ ನಾರಾಯಣ ವಂದಿಸಿದರು.