ಬೀಜಾಡಿ:ಪ್ರಾಣಿ,ಪಕ್ಷಿ,ಮಾನವ ಜೀವಿಸುವ ಈ ಭೂಮಿಯಲ್ಲಿ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಂಡಲ್ಲಿ ದೊಡ್ಡ ಸಮಸ್ಯೆ ಸೃಷ್ಠಿಯಾಗಲಿದೆ. ಅದಕ್ಕಾಗಿ ಪ್ರತಿಯೊಬ್ಬ ನಾಗರಿಕರು ಜಲ ರಕ್ಷಣೆಗೆ ಬದ್ಧರಾಗಬೇಕು ಎಂದು ರೋಟರಿ ಕ್ಲಬ್ ಕುಂದಾಪುರ ರಿವರ್‍ಸೈಡ್ ಮಾಜಿ ಅಧ್ಯಕ್ಷ ಮಂಜುನಾಥ ಕೆ.ಎಸ್ ಹೇಳಿದರು.
ಅವರು ರೋಟರಿ ಕ್ಲಬ್ ಕುಂದಾಪುರ ರಿವರ್‍ಸೈಡ್, ಬೀಜಾಡಿ-ಗೋಪಾಡಿ ರೋಟರಿ ಸಮುದಾಯದಳ ಮತ್ತು ಬೀಜಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ನಡೆದ ಮಣ್ಣಿನ ಫಲವತ್ತತೆ, ಸಂರಕ್ಷಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷ ಜಗನ್ನಾಥ ಮೊಗೇರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ್ ಹೆಬ್ಬಾರ್, ರೋಟರಿ ಸಮುದಾಯ ದಳದ ಹಿಂದಿನ ಅಧ್ಯಕ್ಷ ಬಿ.ಜಿ.ನಾಗರಾಜ್ ,ನೂತನ ಅಧ್ಯಕ್ಷ ಪ್ರದೀಪ್ ದೇವಾಡಿಗ,ಕಾರ್ಯದರ್ಶಿ ಪಾಂಡುರಂಗ,ಕೋಶಾಧಿಕಾರಿ ಗಜೇಂದ್ರ ಮೊಗವೀರ, ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ್ ಮೊಗವೀರ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಿಂದಿನ ಕಾರ್ಯದರ್ಶಿ ರೋನಿ ಡಿ.ಸೋಜಾ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ರೈತರಿಗೆ ಸಾವಯವ ರಸಗೊಬ್ಬರು ವಿತರಿಸಲಾಯಿತು.