ಬೀಜಾಡಿ: ಹಳೆ ವಿದ್ಯಾರ್ಥಿಗಳ ಸಮ್ಮಿಲನ ‘ರೂವಾರಿ’ ಸಮಾರೋಪ


ಬೀಜಾಡಿ: ಶಾಲೆಯ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿ ಸಂಘ ಹಳೆ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸುವ ನಿಟ್ಟಿನಲ್ಲಿ ‘ರೂವಾರಿ’ ಭಾವ ನೆನಪುಗಳ ಸಂಗಮ ಕಾರ್ಯಕ್ರಮ ಸಂಘಟಿಸಿರುವುದು ಒಳ್ಳೆಯ ಬೆಳವಣೆಗೆ. ಇದು ಮುಂದಿನ ದಿನದಲ್ಲಿ ಶಾಲೆಯ ಅಭಿವೃದ್ದಿಗೆ ಸಹಾಯವಾಗಲಿದೆ ಎಂದು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಶಿಕ್ಷಕ ಕೃಷ್ಣಮೂರ್ತಿ ಪಿ.ಕೆ ಹೇಳಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ ಮೂಡು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ನಡೆದ ಹಳೆ ವಿದ್ಯಾರ್ಥಿಗಳ ಸಮ್ಮಿಲನ ‘ರೂವಾರಿ-2023’ ಭಾವ-ನೆನಪುಗಳ ಸಂಗಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪದ ಮಾತುಗಳನ್ನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್‍ಕುಮಾರ್ ಬಿ.ಆರ್ ವಹಿಸಿದ್ದರು.
ಉದ್ಯಮಿ,ದಾನಿ ವಿಶ್ವನಾಥ ಹೆಗ್ಡೆ, ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಿ.ವಾದಿರಾಜ್ ಹೆಬ್ಬಾರ್, ಚಂದ್ರ ಬಿ.ಎನ್., ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಪ್ರವೀಣಾ ಶೆಟ್ಟಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿಯ ಅಧ್ಯಕ್ಷ ಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಅಮೀನ್, ಕೋಶಾಧಿಕಾರಿ ನವೀನ್ ಕುಮಾರ್, ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ್ ಮೊಗವೀರ, ನಂದಿನಿ ಫ್ರೆಂಡ್ಸ್‍ನ ಅಧ್ಯಕ್ಷ ಪ್ರಶಾಂತ್ ಗೋಳಿಬೆಟ್ಟು, ಬೆಳ್ಳಂಕಿ ಫ್ರೆಂಡ್ಸ್‍ನ ಅಧ್ಯಕ್ಷ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿಗಳಾದ ಗೀತಾ ಸ್ವಾಗತಿಸಿದರು. ವೀಣಾ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಗಣೇಶ್ ಕಾಂಚನ್ ಸಹಕರಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.