

ಕೋಟ: 30ನೇ ವರ್ಷದ ಸಂಭ್ರಮದಲ್ಲಿ ಇರುವ ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಮಿತ್ರ ಸಂಗಮ ಬೀಜಾಡಿ-ಗೋಪಾಡಿ, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಹಾಗೂ ಸಂಗಮ ಸ್ವಸಹಾಯ ಸಂಘ ಬೀಜಾಡಿ ಇವರ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಬೀಜಾಡಿ ಮಿತ್ರಸೌಧ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಸಂಗಮದ ಅಧ್ಯಕ್ಷ ವೇದಮೂರ್ತಿ ಶಂಕರನಾರಾಯಣ ಬಾಯರಿ ವಹಿಸಿದ್ದರು. ಧ್ವಜಾರೋಹಣವನ್ನು ಉದ್ಯಮಿ ಸತೀಶ್ ನರಸಿಂಹ ಶೇರೆಗಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಗಮ ಸ್ವಸಹಾಯ ಸಂಘದ ಅಧ್ಯಕ್ಷ ರಾಜೇಶ್ ಆಚಾರ್ಯ ಗೋವಾಡಿ,ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಶೆಟ್ಟಿ,ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ ಅಮೀನ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು,ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮಿತ್ರ ಸಂಗಮದ ಗೌರವಾಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್ ಸ್ವಾಗತಿಸಿದರು.ಉಪಾಧ್ಯಕ್ಷ ಅನೂಪ್ ಕುಮಾರ್ ಬಿ.ಆರ್ ವಂದಿಸಿದರು. ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿಯ ಅಧ್ಯಕ್ಷ ಚಂದ್ರ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

