ಬೀಜಾಡಿ: ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ನಾವು ಕಲಿತ ಶಾಲೆಯ ಅಮೃತ ಮಹೋತ್ಸವವನ್ನು ಊರಿನ ಹಬ್ಬದ ಹಾಗೇ ಸಂಭ್ರಮದಿಂದ ಆಚರಿಸಿಕೊಳ್ಳಲು ಸಕಲ ರೀತಿಯಲ್ಲಿ ಸಹಾಯ-ಸಹಕಾರ ನೀಡಬೇಕು.ಒಂದು ಮಾದರಿ ಕಾರ್ಯಕ್ರಮವಾಗಿ ಸಂಘಟನೆಗೊಳ್ಳಬೇಕು ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿಮೂಡು ಇದರ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ, ಬೀಜಾಡಿ ಗ್ರಾ.ಪಂ. ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ಹೇಳಿದರು.ಅವರು ಭಾನುವಾರ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಪ್ರಯುಕ್ತ ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳಿಗೆ ನಡೆದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀಜಾಡಿ ಪೂಜಾ ಟೈಲ್ಸ್ ಮಾಲಿಕ ಸುಭಾಷ್ ಜೀ ಕ್ರೀಡಾಕೂಟ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರ ಬಿ.ಎನ್.,ಎಸ್ಡಿಎಂಸಿಯ ಅಧ್ಯಕ್ಷ ಪ್ರಕಾಶ್ ಗಾಣಿಗ, ಅಮೃತ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಪ್ರಶಾಂತ ತೋಳಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ಕುಮಾರ್ ಬಿ.ಆರ್., ಕಾರ್ಯದರ್ಶಿ ರಾಘವೇಂದ್ರ ಅಮೀನ್, ಮುಖ್ಯ ಶಿಕ್ಷಕಿ ಪ್ರವೀಣಾ ಶೆಟ್ಟಿ, ತೀರ್ಪುಗಾರ ರಾಜೇಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಚಂದ್ರಶೇಖರ ಬೀಜಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.