ಬೆಂಗಳೂರು: ಹೊಸ ವರ್ಷದಂದು ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲು ಪೊಲೀಸರು ರೂಲ್ಸ್ ಜಾರಿಗೊಳಿಸುತ್ತಿದ್ದಾರೆ. ಹೊಸ ಕಾನೂನುಗಳಲ್ಲಿ ರಾತ್ರಿ 1 ಗಂಟೆಗೆ ಎಲ್ಲಾ ಪಾರ್ಟಿಗಳು ಬಂದ್ ಆಗಬೇಕು. ಕ್ಲಬ್, ಪಬ್, ಹೊಟೇಲ್ ಸೇರಿದಂತೆ ಎಲ್ಲಾ ಪಾರ್ಟಿಗೂ ರಾತ್ರಿ 1 ಗಂಟೆವರೆಗೆ ಮಾತ್ರ ಅವರಾಶ ನೀಡಿದ್ದಾರೆ.
ಮಹಿಳಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಡಿಸೆಂಬರ್ 31ರ ರಾತ್ರಿ ಬೆಂಗಳೂರು ಪೊಲೀಸರು ನಗರದ ವಿವಿಧ ಭಾಗಗಳಲ್ಲಿ 48 ಚೆಕ್ ಪೊಂಯ್ಟ್ ಗಳನ್ನು ನಿರ್ಮಿಸಿ ಎಲ್ಲರ ಮೇಲೂ ಹದ್ದಿನ ಕಣ್ಣಿಡಲಾಗುತ್ತದೆ. ಮುಪ್ತಿಯಯಲ್ಲೂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಲಿದೆ. ಪೊಲೀಸರು ಹೈ ಅಲರ್ಟ್ ಆಗಿದ್ದು, ತೀವ್ರ ನಿಘಾವಹಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಎಂಜಿ ರೋಡ್, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರೋಡ್ ಸೇರಿ ಹೊಸ ಪರ್ಷ ಪಾರ್ಟಿ ಆಯೋಜಿಸುವ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗುತ್ತದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆ ಪರೆಗೆ ಬೆಂಗಳೂರಿನ ಎಲ್ಲಾ ಫ್ಲೈ ಓವರ್ ಬಂದ್ ಆಗಲಿದೆ. ಪಾರ್ಟಿ ಆಯೋಜಿಸುವ, ಹೆಚ್ಚಿನ ಜನ ಸೇರುವ ಸ್ಥಳಗಳಲ್ಲಿ ಸಿಸಿಟಿವಿ ಅಳಪಡಿಸಿ ನಿಗಾವಹಿಸಲಾಗುತ್ತದೆ.
5,200 ಕಾನ್ಸ್ಟೇಬಲ್, 1800 ಮುಖ್ಯಪೇದೆ, 600 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, 160 ಇನ್ಸ್ಪೆಕ್ಟರ್, 45 ಅಸಿಸ್ಟೆಂಟ್ ಕಮಿಷನರ್, 15 ಡೆಪ್ಯೂಚಿ ಕಮಿಷನರ್, ಒರ್ವ ಜಾಯಿಂಟ್ ಕಮಿಷನರ್ ಆಫ್ ಪೊಲೀಸ್, ಇಬ್ಬರು ಅಡೀಷನಲ್ ಕಮಿಷನರ್ ಆಫ್ ಪೊಲೀಸ್ ನಿಯೋಜನೆ ಮಾಡಲಾಗಿದೆ. ಈ ಪೊಲೀಸ್ ಪಡೆ ಬೆಂಗಳೂರಿನ ಮೇಲೆ ಹದ್ದಿನ ಕಣ್ಣಿಡಲಿದೆ.