

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ “ದರ್ಶನ 2024-25” ವಾರ್ಷಿಕ ಸಂಚಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಕೊಡಮಾಡುವ ಅತ್ಯುತ್ತಮ ಕಾಲೇಜು ವಾರ್ಷಿಕ ಸಂಚಿಕೆ ಪ್ರಶಸ್ತಿಯನ್ನು ದ್ವಿತೀಯ ಬಹುಮಾನದೊಂದಿಗೆ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


