ಕನ್ನಡ ಚಿತ್ರರಂಗದ ಹಿರಿಯ ಉತ್ತಮ ನಟ ರಾಜೇಶ್ ನಿಧನ

JANANUDI.COM NETWORK


ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ರಾಜೇಶ್ ಶನಿವಾರ ನಿಧನ ಹೊಂದಿದರು

ರಾಜೇಶ್‌ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.
ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.
೧೫೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ ಮಾಡಿದ ರಾಜೇಶ್ ಕಲಾ ರಸಿಕರಲ್ಲಿ ಮೆಚ್ಚುಗೆ ಗಳಿಸಿದ್ದರು, ಅವರ ಕೆಲವು ಚಿತ್ರಗಳು ತುಂಬ ಯಶಸ್ವಿಯಾಗಿದ್ದವು
ಮಧ್ಯಾಹ್ನ 3:30ರ ನಂತರ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.