ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ” ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮ

JANANUDI.COM NETWOEK

ಕುಂದಾಪುರ: ಫೆಬ್ರವರಿ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ” ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್. ಪಿ.ನಾರಾಯಣ ಶೆಟ್ಟಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯೊಂದಿಗೆ ಸಾಕಷ್ಟು ಪ್ರಯತ್ನ ಮತ್ತು ತಯಾರಿ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಿಮ್ಮ ಪರಿಶ್ರಮ ಇರಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ ಜಿ ಎಂ ಗೊಂಡ ಉಪಸ್ಥಿತರಿದ್ದರು.
ತರಬೇತಿ ಕಾರ್ಯಕ್ರಮದ ಸಂಚಾಲಕರಾದ ಡಾ.ಸರೋಜ ಎಂ ಸ್ವಾಗತಿಸಿದರು.
ಉಪನ್ಯಾಸಕ ಗುರುರಾಜ್ ನಾಯಕ್ ವಂದಿಸಿದರು.