ಕುಂದಪ್ರಭ ಸಂಸ್ಥೆಯ ವತಿಯಿಂದ ಕುಂದಾಪುರ ಭಂಡಾರ್‍ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಗೆ ಕೋ.ಮ. ಕಾರಂತ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭ ಜನವರಿ 1 ರಂದು ಮಧ್ಯಾಹ್ನ 4 ಗಂಟೆಗೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಲಘು ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ವಹಿಸಲಿದ್ದಾರೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ, ಡಾ. ಎ. ರಂಜಿತ್ ಕುಮಾರ್ ಶೆಟ್ಟಿಯವರ 20 ಕಥೆಗಳು ಬಿಡುಗಡೆ ಮಾಡಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಪ್ರತಿಭಾನ್ವಿತರನ್ನು ಗೌರವಿಸಲಿದ್ದಾರೆ. ರೋಟರಿ ಜಿಲ್ಲಾ ಮಾಜಿ ಗವರ್ನರ್ ಅಭಿನಂದನ್ ಶೆಟ್ಟಿ, ಅಭಿನಂದನಾ ಭಾಷಣ ಮಾಡಲಿದ್ದಾರೆ.
ಭಂಡಾರ್‍ಕಾರ್ಸ್ ಕಾಲೇಜಿನ ಸಹಯೋಗದೊಂದಿಗೆ ಸಮಾರಂಭದ ಆರಂಭದಲ್ಲಿ ಕೋಟೇಶ್ವರ ವೇಣುಗೋಪಾಲ ಭಟ್ ತಂಡದವರಿಂದ ಲಘು ಸಂಗೀತ ಕಾರ್ಯಕ್ರಮ ನಡೆಯಲಿದೆ. ಪ್ರತಿಭಾನ್ವಿತ ಕಲಾವಿದರಾದ ಕೆ. ವಿಘ್ನೇಶ್ ಕಾಮತ್, ಶ್ರೀಧರ ಭಟ್ ಕೋಟೇಶ್ವರ ಭಾಗವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಸಾರ್ವಜನಿಕರನ್ನು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ, ಸಮಾರಂಭದ ಸಂಯೋಜಕ ಕೋ ಶಿವಾನಂದ ಕಾರಂತ ಸ್ವಾಗತಿಸಿದ್ದಾರೆ.