

ಕುಂದಾಪುರ: ಜುಲೈ 21ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಇವುಗಳ ಸಹಯೋಗದೊಂದಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಐದು ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲರಾದ ಡಾ. ಶುಭಕರಾಚಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಗಣಕಯಂತ್ರ ವಿಭಾಗ ಮುಖ್ಯಸ್ಥರು ಪ್ರೊ. ಗಣೇಶ್ ಕೆ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕಿಗಳಾಗಿ ಮ್ಯಾಜಿಕ್ ಬಸ್ ಫೌಂಡೇಶನ್ ನ ನವೀನ್ ಮತ್ತು ರಾಹುಲ್ ಉಪಸ್ಥಿತರಿದ್ದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರು ಹಾಗೂ ಪ್ಲೇಸ್ಮೆಂಟ್ ಸೆಲ್ ನ ಸಂಚಾಲಕರಾದ ರಾಜೇಂದ್ರ ಹೋಬಳಿದಾರ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಪ್ರೋ ರಾಮಚಂದ್ರ ಆಚಾರಿ , ಸಿಬ್ಬಂದಿ ಸುರೇಶ್ ಕೆ ಅವರು ಉಪಸ್ಥಿತರಿದ್ದರು.


