

ಕುಂದಾಪುರ: ಮೇ 4ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಮಾತನಾಡಿ ಶಿಕ್ಷಕರು ಮತ್ತು ಪೋಷಕರು ಪರಸ್ಪರ ಅತ್ಯುತ್ತಮ ಬಾಂಧವ್ಯವನ್ನು ಹೊಂದಿರಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪೋಷಕರು ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ ಪೊಷಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿಗಳಾದ ಸಂಜೀವ ತೆಕ್ಕಟ್ಟೆ, ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ದುರ್ಗಾಪ್ರಸಾದ್ ಮಯ್ಯ ವಂದಿಸಿದರು. ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.