ಕುಂದಾಪುರ: ಆಗಸ್ಟ್ 12ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್. ಶೆಣೈ ಮಾತನಾಡಿ ಹೊಸತೊಂದು ಆಶಯ ಮತ್ತು ಖುಷಿಯೊಂದಿಗೆ ಆಗಮಿಸಿದ ವಿದ್ಯಾರ್ಥಿಗಳೇ ಆದಷ್ಟು ಕೆಟ್ಟ ಗುಣಗಳಿಂದ ದೂರವಿರಿ. ನಿಮ್ಮಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಕಾಲೇಜಿನಲ್ಲಿ ಪಾಠ ಮತ್ತು ಪಾಠೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬದುಕನ್ನು ರೂಪಿಸಿಕೊಳ್ಳವತ್ತ ಗಮನಕೊಡಿ. ಕಾಲೇಜಿನಲ್ಲಿ ಸಾಕಷ್ಟು ಸೌಲಭ್ಯಗಳಿವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಭವಿಷ್ಯ ರೂಪಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನವನ್ನು ಸ್ಥಾನ ಪಡೆಯುವಂತಾಗಲಿ. ಭಂಡಾರ್ಕಾರ್ಸ್ ಕಾಲೇಜು ಹೆಮ್ಮೆ ಪಡುವಂತಹ ವ್ಯಕ್ತಿಗಳಾಗಿ ಬೆಳೆಯಿರಿ ಎಂದು ಹೇಳಿದರು. ಜೊತೆಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ನಿಶಾ ಎಮ್. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಗಣೇಶ್ ಕೆ., ಇತಿಹಾಸ ವಿಭಾಗದ ಉಪನ್ಯಾಸಕಿ ಪ್ರೊ. ಸ್ನೇಹ ಎಸ್. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ.ಅರುಣ.ಎ. ಎಸ್. ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಅರ್ಚನಾ ಅರವಿಂದ ಉಪಸ್ಥಿತರಿದ್ದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ಉಪನ್ಯಾಸಕಿ ವಿಜಯಲಕ್ಷ್ಮಿ ಶೆಟ್ಟಿ ಕಾಲೇಜಿನ ಮೂಲಸೌಕರ್ಯಗಳ ಕುರಿತು ತಿಳಿಸಿದರು. ಕಂಪ್ಯೂಟರ್ ವಿಭಾಗದ ಉಪನ್ಯಾಸಕ ರಾಮಚಂದ್ರ ಆಚಾರ್ಯ ವಂದಿಸಿದರು.
ರೇಡಿಯೋ ಕುಂದಾಪ್ರ 89.6 ಎಫ್.ಎಮ್ ಇದರ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.