

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಭಾರತೀಯ ಸೇನೆಗೆ ಲೆಪ್ಟಿನೆಂಟ್ ಆಗಿ ಆಯ್ಕೆಗೊಂಡ ಭಾರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮಾತನಾಡಿ
ಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಎನ್.ಸಿ.ಸಿ ವಿಶೇಷ ಆಯ್ಕೆ ಪರೀಕ್ಷೆ ಮೂಲಕ ಭಾರತೀಯ ಸೇನೆಗೆ ಲೆಪ್ಟಿನೆಂಟ್ ಆಗಿ ಆಯ್ಕೆಗೊಂಡಿರುವುದು ಹೆಮ್ಮೆಯ ವಿಷಯ. ಅವರು ಈ ಸಾಧನೆ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ, ಕಾಲೇಜಿನ ಎನ್. ಸಿ.ಸಿ. ಆರ್ಮಿ ಕ್ಯಾಪ್ಟನ್ ಅಂಜನ್ ಕುಮಾರ್ ಎ.ಎಲ್. ನೇವಿ ವಿಭಾಗದ ಸಬ್.ಲೆಫ್ಟಿನೆಂಟ್ ಶರಣ್ ಎಸ್.ಜೆ. ಉಪಸ್ಥಿತರಿದ್ದರು.

