

ಕುಂದಾಪುರ: ಇಂದಿನ ವಿದ್ಯಾರ್ಥಿಗಳು ರಾಷ್ಟ್ರದ ಉಜ್ವಲ ಭವಿಷ್ಯದ ಶಿಲ್ಪಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಹೋಟೆಲ್ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು.
ಅವರು ಆಗಸ್ಟ್ 28ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆದ “ಕುಂದಗನ್ನಡದ ಮಾಳಿ-ಗುಡ್ಗ್ -ಮಿಂಚ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭವಿಷ್ಯದಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶಿಷ್ಟವಾದ ಕುಂದಾಪುರ ಕನ್ನಡ ಭಾಷೆಯ ಕುರಿತು ಹಮ್ಮಿಕೊಂಡ ಈ ಕಾರ್ಯಕ್ರಮ ಮುನ್ನುಡಿಯಾಗಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು . ಎಸ್. ಶೆಣೈ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯೋಗಗುರು ಹವ್ಯಾಸಿ ರಂಗಭೂಮಿ ಕಲಾವಿದ ಆಟ್ಕೆರೆ ಬಾಬು ಪೈ ಮಾತನಾಡಿ ಭಾಷೆಯನ್ನು ಸರ್ವರೂ ಸೇರಿ ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ಹಂಚಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಕಾರ್ಯಕ್ರಮ ಸಂಯೋಜಕರಾದ ಗೀತಾ ಪ್ರಭು ಉಪಸ್ಥಿತರಿದ್ದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ವಿದ್ಯಾರ್ಥಿ ಮತ್ತು ಉಪನ್ಯಾಸಕರಿಂದ ಕನ್ನಡ ಭಾಷೆಯ ಮನರಂಜನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ವರ್ಷಾ ಕಾರ್ಯಕ್ರಮ ನಿರೂಪಿಸಿದರು.ಅಂಜನಾ ಸ್ವಾಗತಿಸಿದರು. ಸೃಜನ ವಂದಿಸಿದರು.


