ಕುಂದಾಪುರ: ಫೆಬ್ರವರಿ 19ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಇವರು ನಮ್ಮ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಸವಿಸ್ತಾರವಾಗಿ ಅರಿವು ಮೂಡಿಸುವುದರ ಜೊತೆಗೆ,ಊರ ಗ್ರಾಮಸ್ಥರು,ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಶಿಬಿರಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ನೇತ್ರಾವತಿ ಆಚಾರ್ಯ, ಪೂರ್ಣಿಮಾ, ಕುಸುಮ, ಗಿರಿಜಾ, ಪೂನಮ್ಮ , ದೀಪಿಕಾ ಶೆಟ್ಟಿ, ದಿನೇಶ್ ಭಟ್, ಹಾಗೂ ಎನ್. ಎಸ್. ಎಸ್. ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರ್, ಅರುಣ್.ಎ.ಎಸ್. ಉಪಸ್ಥಿತರಿದ್ದರು.