

ಕುಂದಾಪುರ: ನವೆಂಬರ್ 9ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಸಂವಹನ ಕಲೆ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಡಾ. ಹಯವದನ ಉಪಾಧ್ಯಾಯ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ಸಂವಹನ ಕಲೆ ಕರಗತ ಮಾಡಿಕೊಳ್ಳಲು ಬೇಕಾದ ವಿಧಾನಗಳ ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ಯುಥ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಸತ್ಯನಾರಾಯಣ, ಉಪನ್ಯಾಸಕಿ ಶ್ವೇತಾ ಮತ್ತು ಉಪನ್ಯಾಸಕ ವಿದ್ಯಾಧರ ಉಪಸ್ಥಿತರಿದ್ದರು.
ಯುಥ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ ಕಾರ್ಯಕ್ರಮ ನಿರೂಪಿಸಿದರು.
