

ಕುಂದಾಪುರ ಡಿಸೆಂಬರ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ 2022-23 ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿಶ್ವಸ್ಥರಾದ ಪ್ರಕಾಶ್ ಟಿ.ಸೋನ್ಸ್ ಅವರು ಸಾವಿರಾರು ಮಕ್ಕಳು ಕರಾಟೆಯಿಂದ ಶಿಸ್ತು ಕಲಿಯುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಪಡೆದ ಕರಾಟೆ ಪಟುಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಆರ್ಥಿಕ ನೆರವು ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬ್ಲ್ಯಾಕ್ ಬೆಲ್ಟ್ 5ಡ್ಯಾನ್ ಸಂದೀಪ್ ಪೂಜಾರಿ ದಕ್ಷಿಣ ಕನ್ನಡ ಉಡುಪಿ ಕರಾಟೆ ಅಧ್ಯಕ್ಷ ಪ್ರವೀಣ್ ಕುಮಾರ್, ಮಂಗಳೂರು ವಿಶ್ವವಿದ್ಯಾಲಯ ಸಹಾಯಕ ದೈಹಿಕ ನಿರ್ದೇಶಕ ಹರಿದಾಸ್ ಕೂಳೂರು ಉಪಸ್ಥಿತರಿದ್ದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ದೈಹಿಕ ನಿರ್ದೇಶಕ ಶಂಕರನಾರಾಯಣ. ಕೆ ಸ್ವಾಗತಿಸಿದರು. ದೈಹಿಕ ನಿರ್ದೇಶಕಿ ವನಿತಾ ವಂದಿಸಿದರು. ವಿದ್ಯಾರ್ಥಿನಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.