

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭಗಳ ಮೊದಲ ದಿನ ಮಾರ್ಚ್ 26ರಂದು ಅಂತರ್ ತರಗತಿ ಪ್ರತಿಭಾ ಪ್ರದರ್ಶನ “ಜಾನಪದ ಲೋಕ” ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸಚ್ಚಿದಾನಂದ ಚಾತ್ರ ಅವರು ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ ಚಂಡ್ಕಲಾ ಆಗಮಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಅರುಣ್ ಎ.ಎಸ್. ಕಾರ್ಯಕ್ರಮ ನಿರೂಪಿಸಿದರು.
ನಂತರ ನಡೆದ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕಲಾ ವಿಭಾಗದ ವಿದ್ಯಾರ್ಥಿಗಳು, ದ್ವಿತೀಯ ಸ್ಥಾನವನ್ನು ಅಂತಿಮ ವಾಣಿಜ್ಯ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪ್ರಥಮ ಮತ್ತು ದ್ವಿತೀಯ ವಿಜ್ಞಾನ ವಿದ್ಯಾರ್ಥಿಗಳು ಪಡೆದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ತೀರ್ಪುಗಾರರಾಗಿ ಆಗಮಿಸಿದ್ದ ಜಾನಪದ ಕಲಾವಿದ ಶಂಕರದಾಸ ಚಂಡ್ಕಲಾ, ರಮೇಶ್ ಕಲ್ಮಾಡಿ, ಭಾಗ್ಯಲಕ್ಷ್ಮಿ ಉಪ್ಪೂರು ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಲಲಿತಕಲಾ ಸಂಘದ ಸಂಚಾಲಕರಾದ ಶಶಾಂಕ್ ಪಟೇಲ್ ಉಪಸ್ಥಿತರಿದ್ದರು ಕನ್ನಡ ಉಪನ್ಯಾಸಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.
