







ಕುಂದಾಪುರ: ಜನವರಿ 18ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಕಾಲೇಜಿನ ಯುಥ್ ರೆಡ್ ಕ್ರಾಸ್, ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಇವರ ಸಂಯುಕ್ತಾಶ್ರಯದಲ್ಲಿ ರಕ್ತ ದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಂ ಶೆಟ್ಟಿ, ಸದಸ್ಯರಾದ ಡಾ. ಸೋನಿ ಡಿಕೋಸ್ತಾ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ ಜಿ.ಎಂ.ಗೊಂಡ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಸತ್ಯನಾರಾಯಣ ರೇಂಜರ್ಸ್ ಮತ್ತು ರೋವರ್ಸ್ ಇದರ ರಿತಿನ್ ಮತ್ತು ಅಕ್ಷತಾ ಉಪಸ್ಥಿತರಿದ್ದರು.
ಸುಮಾರು 201ಯುನಿಟ್ ರಕ್ತ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ರಕ್ತ ನಿಧಿ ಕೇಂದ್ರಕ್ಕೆ ನೀಡಲಾಯಿತು.