

ಕುಂದಾಪುರ: ಕ್ರೀಡೆಯಿಂದ ದೈಹಿಕ ಮಾನಸಿಕ ಸ್ಥೈರ್ಯ ಬೆಳೆಯುತ್ತದೆ ಎಂದು ಉದ್ಯಮಿ ಚಂದ್ರೇಶ್ ಶೆಟ್ಟಿ ಹೇಳಿದರು.
ಅವರು ಮಾರ್ಚ್ 17ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ (ಉಡುಪಿ ವಲಯ)ವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ಬೆಳೆಸುತ್ತದೆ. ಶಾರೀರಿಕ ಸದೃಢತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜಾ ಅವರು ಮಾತನಾಡಿ ಮಂಗಳೂರು ವಿಶ್ವವಿದ್ಯಾನಿಲಯದ ದ್ವಿತೀಯ ಸೆಮಿಸ್ಟರ್ ನ ಪ್ರಥಮ ಪಂದ್ಯಾಟದಲ್ಲಿ ಭಾಗವಹಿಸಿ. ಕ್ರೀಡೆಯಲ್ಲಿ ಸಾಧನೆ ಮಾಡಿ ಎಂದು ಹೇಳಿದರು.
ಇನ್ನೋರ್ವ ಅತಿಥಿ ರಾಘವೇಂದ್ರ ಶೆಟ್ಟಿ ಲೆಕ್ಕ ಪರಿಶೋಧಕರು, ಬೆಂಗಳೂರು ಇವರು ಮಾತನಾಡಿ ಕಾಲೇಜಿನ ಗುರುಗಳನ್ನು ನೆನಪಿಸಿಕೊಂಡರು.
ಮತ್ತೋರ್ವ ಅತಿಥಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ಮೊಬೈಲ್ ಗೆ ಮಾರು ಹೋಗಬೇಡಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ವೀಕ್ಷಕರಾಗಿ ಆಗಮಿಸಿದ ಡಾ.ಮನೋಜ್ ಕುಮಾರ್, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ, ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಶಂಕರನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಪ್ರೊ.ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.

