ಬಿಐಇಆರ್‍ಟಿ ಶಿಕ್ಷಕರನ್ನು ಗುತ್ತಿಗೆ ಆಧಾರದಲ್ಲಿ
ನೇಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ:- ಜಿಲ್ಲೆಯ ಕೆಲವು ಕ್ಷೇತ್ರ ಸಂಪನ್ಮೂಲ ಕೇಂದ್ರ(ಬಿಆರ್‍ಸಿ)ಗಳಲ್ಲಿ ಖಾಲಿ ಇರುವ ಬಿಐಇಆರ್‍ಟಿ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 31ರ ಸಂಜೆ 5 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಅರ್ಹ ಅಭ್ಯರ್ಥಿಗಳು ಮೇ.31 ರ ಸಂಜೆ 5 ಗಂಟೆಯೊಳಗೆ ಸೂಕ್ತ ದಾಖಲೆಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು ಸಿ.ಡಬ್ಲ್ಯೂ.ಎಸ್.ಎನ್ ಮಕ್ಕಳಿಗೆ ಬೋಧಿಸಲು ಅನುಕೂಲವಾಗಿರುವಂತೆ ವಿಶೇಷ ಬಿಇಡಿ ಪದವಿ ಹೊಂದಿರಬೇಕು, ಆರ್‍ಸಿಐನ ಚಾಲ್ತಿಯಲ್ಲಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು, ಈ ಹುದ್ದೆ ತಾತ್ಕಾಲಿಕವಾಗಿದ್ದು, ಇಲಾಖೆಯ ಮುಂದಿನ ಆದೇಶದವರೆಗೂ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಸದರಿ ಹುದ್ದೆಗೆ ಖಾಯಂ ಶಿಕ್ಷಕರು ನೇಮಕವಾದಲ್ಲಿ ಈ ತಾತ್ಕಾಲಿಕ ಹುದ್ದೆಯ ಗುತ್ತಿಗೆಯೂ ತಂತಾನೆ ರದ್ದಾಗುವುದು ಮತ್ತು ಆಯ್ಕೆಯಾದ ಶಿಕ್ಷಕರು ಇಲಾಖಾ ನಿಯಮಾನುಸಾರ ಕರ್ತವ್ಯಗಳನ್ನು ನಿರ್ವಹಣೆ ಮಾಡಬೇಕು ಮತ್ತು ಸರ್ಕಾರಿ ಶಾಲಾ ಶಿಕ್ಷಕರಿಮದ ಹುದ್ದೆಗಳನ್ನು ಭರ್ತಿ ಮಾಡಿದ ನಂತರ ಖಾಲಿ ಉಳಿದಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.