

ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿಯವರ 156 ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ 121 ನೇ ಜನ್ಮದಿನಾಚರಣೆ ಆಚರಿಸಲಾಯಿತು ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಮಹಾನ್ ನಾಯಕರ
ಉದಾತ್ತ ವಿಚಾರದಾರೆಗಳನ್ನು ತಿಳಿಸಿ ಎಲ್ಲರಿಗೂ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜನ್ಮದಿನದ ಶುಭಾಶಯ ತಿಳಿಸಿದರು.




