ಬೆಂಗಳೂರು : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಅ.21ರಂದು ರಾಜೀನಾಮೆ
ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮರಾಜೀನಾಮೆ ಪತ್ರವನ್ನು
ನೀಡಿದ್ದಾರೆ.
ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ
ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ.
ಬಿಜೆಪಿ ಹೈಕಮಾಂಡ್ ಸಹ ಜೆಡಿಎಸ್ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಅಲ್ಲದೇ ಈ ಹಿಂದೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ
ಮಾಡುವಂತೆ ಕುಮಾರಸ್ವಾಮಿ ಸಹ ಸಿಪಿ ಯೋಗೇಶ್ವರ್ಗೆ ಆಫರ್ ನೀಡಿದ್ದರು. ಸಿಪಿ ಯೋಗೇಶ್ವರ್ ಜೆಡಿಎಸ್ನಿಂದ ಸ್ಪರ್ಧಿಸಲು.
ನಿರಾಕರಿಸಿದ್ದು ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲ್ಲ ಪಕ್ಷೇತರವಾಗಿ ನಿಲ್ಲುತ್ತೇನೆ. ಈ ಕ್ಷಣಕ್ಕೂ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ.
ಇಲ್ಲದಿದ್ದಲ್ಲಿ ಪಕ್ಷೇತರ ಸ್ಪರ್ಧೆ ಮಾಡುವೆ ಎಂದಿದ್ದಾರೆ.