

ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶೈಕ್ಷಣಿಕ ನೀತಿ ( NEP) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಮಿತಿಯ ಸದಸ್ಯರ ಸಭೆಯನ್ನು ಉದ್ಘಾಟಿಸಿ, ಮಾತನಾಡಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದರು.
ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಾಗಿದೆ. ಅದಕ್ಕೆ ಈ ವರ್ಷ ಸಮಯ ಇರಲಿಲ್ಲ ಚುನಾವಣೆ ಫಲಿತಾಂಶದ ಬಂದು ಸರಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆ ಮುಂದುವರಿಸಲಾಗಿದೆ ’ ಎಂದರು.
ಈ ಹೊಸ ನೀತಿ NEP ಗೆ ಏಕಕಾಲದಲ್ಲಿ ವಿದ್ಯಾರ್ಥಿಗಳಿಗೆ, ಪೋಷಕರು, ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರಿಂದ ವಿರೋಧವಿದೆ. ಬಿಜೆಪಿಯು ದೇಶದಲ್ಲಿ ಎಲ್ಲಾ ಕಡೆಗಳಲ್ಲಿ NEP ಜಾರಿಗೊಳಿಸದೆ ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಗೊಳಿಸಿ, ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿ ಕೊಟ್ಟಿದೆ ಎಂದರು.