ಕುಂದಾಪುರ, ಡಿ.೧೦ಃ ಇಂದು ಬ್ಲಾಕ್ ಕಾಂಗ್ರೆಸ್ ಕುಂದಾಪುರ ಕಚೇರಿಯಲ್ಲಿ ಅಗಲಿದ ಮಾಜಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣರವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗ್ಯಾರಂಟಿ ಸಮಿತಿಗಳ ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆಯವರು ‘ ಎಸ್ಎಂ ಕೃಷ್ಣ ರವರು ಮುಖ್ಯಮಂತ್ರಿಗಳಾಗಿದ್ದಾಗ ತೆಗೆದುಕೊಂಡ ದೂರದೃಷ್ಟಿಯ ನಿರ್ಧಾರಗಳು ಇಂದು ರಾಜ್ಯ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರವಾಗಿ ನಿರ್ಮಾಣ ವಾಗಲು ಸಾಧ್ಯವಾಯಿತು’ ಎಂದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು ಮಾತನಾಡಿ ‘ಕಾಂಗ್ರೆಸ್ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಎಸ್ಎಂ ಕೃಷ್ಣರವರು ಸಮರ್ಥವಾಗಿ ನಿಭಾಯಿಸಿ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟರು. ಅವರ ಮುಖ್ಯಮಂತ್ರಿ ಅವಧಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆ ಶಿಕ್ಷಣ ಕ್ರಾಂತಿಗೆ ಸಾಕ್ಷಿಯಾಯಿತು’ ಎಂದರು .
ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, ಐ ಟಿ ಸೆಲ್ ರಾಜ್ಯ ಉಪಾಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ,ಮಹಿಳಾ ಬ್ಲಾಕ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ ,ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮುನಾಫ್ ಕೋಡಿ, ಪುರಸಭೆಗೆ ಕರ್ನಾಟಕ ಸರ್ಕಾರದಿಂದ ನಾಮ ನಿರ್ದೇಶಕ ಸದಸ್ಯತ್ವಕ್ಕೆ ಸೂಚಿತರಾಗಿರುವ ಅಶೋಕ ಸುವರ್ಣ , ಶಶಿಧರ ನಂದಿ ಬೆಟ್ಟ, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್ , ಕುಂದೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ವಿಟ್ಟಲ್ ಕಾಂಚನ್ , ಸೀಮಾ ಚಂದ್ರ ಪೂಜಾರಿ, ಅರುಣ್ ಪಟೇಲ್ , ಜೋಸೆಫ್ ರೆಬೆಲ್ಲೋ , ಎಡಾಲ್ಫ್ ಡಿಕೋಸ್ತಾ , ಜಾಯ್ ರೆಬೆಲ್ಲೊ , ಸಂಗೀತಾ ಇನ್ನಿತರರು ಉಪಸ್ಥಿತರಿದ್ದರು.