

ರಕ್ತದಾನಿಗಳ ಬಳಗ ಮರವಂತೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ ) ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ಮರವಂತೆಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ದಿನಾಂಕ 16/06/2024 ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಡಾ:ಗಣೇಶ್ ಭಟ್ ವೈದ್ಯಾಧೀಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರ ಮರವಂತೆ ಇವರು ವಹಿಸಿದ್ದರು.
ಎಸ್ ಜನಾರ್ಧನ್ ,ನಿವೃತ್ತ ಅಧ್ಯಾಪಕರು ಮರವಂತೆ. ಜಯಕರು ಶೆಟ್ಟಿ ,ಚೇರ್ಮನ್ ಭಾರತೀಯ ರೆಡ್ ಕ್ರಾಸ ಸಂಸ್ಥೆ ಕುಂದಾಪುರ,ಶಿವರಾಮ ಶೆಟ್ಟಿ, ಕೋಶಾಧಿಕಾರಿ ಭಾರತೀಯ ರೆಡ್ ಕ್ರಾಸ ಸಂಸ್ಥೆ ಕುಂದಾಪುರ.ಪ್ರವೀಣ್ ಖಾರ್ವಿ,ಅಧ್ಯಕ್ಷರು,ಮೀನುಗಾರರ ಸಹಕಾರಿ ಸಂಘ (ರಿ )ಮರವಂತೆ ಹಾಗೂ ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಳೆದ 17 ವರ್ಷಗಳಿಂದ ರಕ್ತದಾನ ಕ್ಷೇತ್ರಸಲ್ಲಿ ಸಲ್ಲಿಸಿದ ಸೇವೆಗಾಗಿ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.


