ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ, 60 ವರ್ಷ ಮೇಲ್ಪಟ್ಟವರಿಗೆ, ಅಸ್ವಸ್ಥತೆ ಉಳ್ಳವರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್

JANANUDI.COM NETWORK


ಬೆಂಗಳೂರು, ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ರಾಜ್ಯ ಸರಕಾರದ ಆರೋಗ್ಯ ಸಚಿವ ಡಾ|ಸುಧಾಕರ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗುವುದು. ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಸ್ವಸ್ಥತೆ ಉಳ್ಳವರಿಗೆ ಸಹ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಓಮೈಕ್ರಾನ್ ಸೋಂಕನ್ನು ಶೀಘ್ರವೇ ಪತ್ತೆ ಹಚ್ಚಲು ಹೊಸ ಯಂತ್ರದ ಅವಶ್ಯಕತೆ ಇದೆ ಎಂದು ತಜ್ಞರು ಹೇಳಿದ್ದಾರೆ, ಹೀಗಾಗಿ ಸೂಕ್ತವಾದ ಉಪಕರಣ ಖರೀದಿಸಲು ಸರಕಾರ ಚಿಂತಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಎಂದು ಆರೋಗ್ಯ ಸಚಿವರುತಿಳಿಸಿದ್ದಾರೆ.