ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದಲ್ಲಿ ಮಾ.28 ರಂದು ನಡೆಸಲು ಉದ್ದೇಶಿಸಲಾಗಿದ್ದ್ದ ವರದ ಬಾಲಾಂಜನೇಯಸ್ವಾಮಿ ಬ್ರಹ್ಮರಥೋತ್ಸವವನ್ನು, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ವರದ ಬಾಲಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಏರ್ಪಡಿಸಿದ್ದ ವರದ ಬಾಲಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಕೊರೊನಾ ನಿಯಮಗಳನ್ನು ಅನುಸರಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲು ಉದ್ದೇಶಿಸಲಾಗಿತ್ತು. ನಿಗದಿತ ದಿನಾಂಕವನ್ನು ಪ್ರಕಟಿಸಿ ಆಹ್ವಾನ ಪತ್ರಿಕೆ ಹಂಚಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಜಾತ್ರೆ ನಡೆಸುವುದು ಸೂಕ್ತವಲ್ಲ ಎಂದು ಟ್ರಸ್ಟ್ ನಿರ್ಧರಿಸಿರುವ ಪರಿಣಾಮವಾಗಿ ವಿಶೇಷ ಪೂಜೆ ಹಾಗೂ ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು.
ದೇವಾಲಯ ಸೇವಾ ಟ್ರಸ್ಟ್ ಪದಾಧಿಕಾರಿಗಳಾದ ಸೂರ್ಯನಾರಾಯಣಶೆಟ್ಟಿ, ಗೋಪಿನಾಥರಾವ್, ಕೃಷ್ಣೇಗೌಡ, ಅಪ್ಪೂರು ರಾಜಣ್ಣ, ಸೀನಪ್ಪ ಇದ್ದರು.