

ಬ್ರಹ್ಮಾವರ,ಎ, 01; ಕಾರು ಡಿಕ್ಕಿ- ಕುಂದಾಪುರದ ವಕ್ವಾಡಿ ನಿವಾಸಿ ಶಾಲಾ ವಿದ್ಯಾರ್ಥಿ ಸಾವು ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್ ಕ್ಯಾಂಪ್ ಗೆ ತೆರಳುವಾಗ ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ವಿದ್ಯಾರ್ಥಿ ವಂಶಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಮುಂದಿದ್ದು, ವಕ್ವಾಡಿ ಹೆಬ್ಬಾಗಿಲು ಮನೆ ಶ್ರೀಮತಿ ಆಶಾ ಮತ್ತು ಸಂತೋಷ ಶೆಟ್ಟಿ ಅವರ ಪುತ್ರನಾಗಿದ್ದು, ತಂದೆ ದುಬೈನಲ್ಲಿ ಉದ್ಯೋಗಿಯಾಗಿದ್ದಾರೆ.ಘಟನೆಯ ಮಾಹಿತಿ ತಿಳಿದು ಆಸ್ಪತ್ರೆಯ ಬಳಿ ಬೃಹತ್ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
