

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಂತೋಷ ಕುಮಾರ್ ಶೆಟ್ಟಿ (56) ಕೆ. ನಾಗರಾಜ ಬಂಧಿತರು.ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಮತ್ತು ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಈ ಪ್ರಕರಣದ ಕುರಿತು ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

