

ಬೈಂದೂರು: ಸಿಐಟಿಯು ಸಂಯೋಜಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 7 ರಂದು ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಸಾರಿಗೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಚಾಲಕರಿಗೆ ಮಂಡಳಿಯ ಮೂಲಕ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಯೋಜನೆಯ ಮಾಹಿತಿಯನ್ನು ನೀಡುವ ಮೂಲಕ ನೋಂದಣಿ ಮತ್ತು ಅರ್ಹತೆಗಳು ಹಾಗೂ ಯೋಜನೆಯಡಿಯಲ್ಲಿ ದೊರಕುವ ಸೌಲಭ್ಯಗಳ ಕುರಿತು ವಿವರಣೆ ನೀಡಲಾಯಿತು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ರಾಜೀವ್ ಪಡುಕೋಣೆಯವರು ಸಮಾವೇಶದ ಅಧ್ಯಕ್ಷತೆ ವಹಿಸಿದ್ದು, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ಕುಂದಾಪುರ ತಾಲೂಕು ಸಿಐಟಿಯು ಆಟೋರಿಕ್ಷಾ ಚಾಲಕರ ಸಂಘದ ಮುಖಂಡರಾದ ರಾಜು ದೇವಾಡಿಗ, ರವಿ ಎಂ, ರಮೇಶ್, ಚಂದ್ರಶೇಖರ್ ವಿ. ಹಾಗೂ ಬೈಂದೂರು ತಾಲೂಕು ಕಟ್ಟಡ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು.



