

ಬುಧವಾರ ಮಧ್ಯಾಹ್ನ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ವಾಲಿ ಮಗುಚಿ ಬಿದ್ದಿದೆ. ಅದೇ ಸಂದರ್ಭದಲ್ಲಿ ಲಾರಿಯ ಪಕ್ಕದಲ್ಲಿ ಮಹಿಳೆ ಚಲಾಯಿಸುತ್ತಿದ್ದ ಸ್ಕೂಟಿಯೊಂದು ಸಾಗುತ್ತಿತ್ತು ಸ್ಕೂಟಿಯ ಮೇಲೆ ಲಾರಿ ಮಗುಚಿ ಬಿದ್ದು ಲಾರಿಯಲ್ಲಿದ್ದ ಮಣ್ಣಿನ ಅಡಿಯಲ್ಲಿ ಸ್ಕೂಟಿ ಸಮೇತ ಸವಾರೆ ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿಕೊಂಡರು. ಲಾರಿ ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಲಾರಿಯೊಳಗೆ ಸಿಲುಕಿಕೊಂಡಿದ್ದಾನೆ.
ಅದೇ ಮಾರ್ಗದಲ್ಲಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ಕೋಡಿ ಅಶೋಕ ಪೂಜಾರಿಯವರ ಕಣ್ಣೆದುರೇ ಘಟನೆ ನಡೆದಿದ್ದು. ಆತ ಅಪತ್ಬಾಂಧವನಾಗ ಮಣ್ಣಿನಡಿ ಮುಖ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯನ್ನು ಕೈಗಳಿಂದಲೇ ಮಣ್ಣನ್ನು ಅಗೆದು ಯುವತಿಯನ್ನು ಮೇಲಕ್ಕೆತ್ತಲು ಪ್ರಯತ್ನಿಸಿದ, ನಂತರ ಸ್ಥಳೀಯರ ಸಹಕಾರದಿಂದ ಲಾರಿಯ ಮಣ್ಣಿನಲ್ಲಿ ಮಹಿಳೆಯನ್ನು ಮೇಲಕ್ಕೆ ಎತ್ತಿ ಆಸ್ಪತ್ರೆಗೆ ಕಳುಹಿಸಿ ರಕ್ಷಿಸಲಾಯಿತು. ಅನಂತರ ಸ್ಕೂಟಿಯನ್ನು ತೆರೆವುಗೊಳಿಸಲಾಯಿತು.
