

ಶಿರ್ವ: ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ ಸಂಸ್ಥೆಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ವತಿಯಿಂದ ಜೂನ್ 1 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.
ಇದು ಸ್ಪರ್ಧಾತ್ಮಕ ಯುಗ ಎಂದು ತಿಳಿದಿದೆ ಶಿಕ್ಷಣದ ಜೊತೆಗೆ ಪ್ರತಿಯೊಬ್ಬ ಅಭ್ಯರ್ಥಿಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗಿರುವ ಕೌಶಲಗಳನ್ನು ಕಲಿತು ಉದ್ಯೋಗವನ್ನು ಪಡೆಯಲು ಹಾಗೂ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು
ಗ್ಲೋಟಚ್ ಟೆಕ್ನಾಲಜೀಸ್ ನ ಟ್ಯಾಲೆಂಟ್ ಅಕ್ವೇಶನ್ ಮ್ಯಾನೇಜರ್ ಎಚ್.ಆರ್ ಶ್ರೀ ಎಬಿನೇಜರ್ ರಾಜಾರವರು ಅಭ್ಯರ್ಥಿಗಳನುದ್ದೇಶಿಸಿಮಾತನಾಡಿದರು.
ಇಂದಿನ ಕಾಲದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಳು ಲಭ್ಯವಿದ್ದು ಅದರ ಮಾಹಿತಿಯನ್ನು ಸೂಕ್ತವಾಗಿ ಪಡೆದು – ಸೂಕ್ತ ತಯಾರಿಕೆಯನ್ನು ಮಾಡಿಕೊಂಡು ಇಂತಹ ಸಂದರ್ಶನಗಳಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬೇಕಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ | ಹೆರಾಲ್ಡ್ ಐವನ್ ಮೋನಿಸ್ ರವರು ಶುಭ ಹಾರೈಸಿದರು.
ಇಂದು ಸಂವಹನ ಕೌಶಲ್ಯಗಳ ಮಹತ್ವವನ್ನು ಅಭ್ಯರ್ಥಿಗಳು ಅರಿತುಕೊಂಡು ಇಂತಹ ಸಂದರ್ಶನಕ್ಕೆ ಭಾಗವಹಿಸಿ ಉದ್ಯೋಗ ಪಡೆಯಬೇಕು ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಶ್ರೀ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಮಾಹಿತಿ ನೀಡಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಗ್ಲೋಟಚ್ ಟೆಕ್ನಾಲಜೀಸ್ ಸಂಸ್ಥೆಯ ಸೀನಿಯರ್ ಅನಲಿಸ್ಟ್ ಟ್ಯಾಲೆಂಟ್ ಅಕ್ವೇಶನ್ ಶ್ವೇತಾ, ಪ್ರಮುಖ ತರಬೇತುದಾರ ಶ್ರೀಜೀತ್, ಉಪನ್ಯಾಸಕಿ ದಿವ್ಯಶ್ರೀ ಬಿ ,ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಅನುಪ್ ನಾಯಕ್ ಸಹಕರಿಸಿದರು.
ಕು. ಸುಪ್ರಿಯಾ ಮುಗೇರಾಯ ಮತ್ತು ಬಳಗ ಪ್ರಾರ್ಥಿಸಿ,ಕು. ರಕ್ಷಿತಾ ವಂದಿಸಿದರು. ಕು. ಚಂದನ ಸ್ವಾಗತಿಸಿ, ಕು. ಹರ್ಷಿತ ಕಾರ್ಯಕ್ರಮ ನಿರೂಪಿಸಿದರು.




