

ಬೈಂದೂರು: ನಿಲ್ಲಿಸಿದ್ದ ಕಾರು ಕಳ್ಳತನವಾಗಿತ್ತು. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಕಾರು ಕಳವಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪೌಜಾನ್ ಅಹ್ಮದ್ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ನೀಡಿರುವ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪತ್ತೆಗಾಗಿ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡ ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಾಧೀನಪಡಿಸಿಕೊಂಡಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ರಕ್ಷಕ್ ನೆಟ್ವರ್ಕ್ ಆ್ಯಂಡ್ ಸೆಕ್ಯೂರಿಟಿ ಸಲ್ಯೂಷನ್ ಸಂಸ್ಥೆ ಸಹಕರಿಸಿತ್ತು.