JANANUDI.COM NETWORK
![](https://jananudi.com/wp-content/uploads/2022/01/78db2ffa-9e79-42cf-8887-a20b0a8de7fd-1024x840.jpg)
ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಮುಂದೇನು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಹಳೆ ವಿದ್ಯಾರ್ಥಿನಿ ಡಾ. ಮಾರ್ಗರೇಟ್ ಲವೀನ ಫ಼ೆರ್ನಾಂಡಿಸ್ ಭಾಗವಹಿಸಿ “ಪಿಯುಸಿ ಅಂತವು ವಿದ್ಯಾರ್ಥಿಗಳಿಗೆ ಬಹಳ ಪ್ರಮುಖವಾದ ಹಂತವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ವಿವಿಧ ಕೋರ್ಸ್ ಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಂಡು ಉತ್ತಮ ಗುರಿಯನ್ನು ನಿರ್ಧರಿಸಿಕೊಂಡು ಮುನ್ನಡೆಯಬೇಕು. ಈ ದಿಸೆಯಲ್ಲಿ ಲೊರೆನ್ಶಿಯನ್ ಸೆಂಟರ್ ಫಾರ್ ಎಕ್ಸಲೆನ್ಸ್ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ “ಎಂದು ಹೇಳಿದರು.
ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿ, ಇತಿಹಾಸ ಉಪನ್ಯಾಸಕರಾದ ನವೀನ್ ಕೊರೆಯ ನಿರೂಪಿಸಿ ವಂದಿಸಿದರು. ಹಿರಿಯ ಉಪನ್ಯಾಸಕಿ ಜೆಸಿಂತಾ ಲೋಬೋ ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿದರು. ಕಾರ್ಯಕ್ರಮದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.