ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಹೊಟೇಲ್ ಒಂದರಲ್ಲಿ
ಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಚಿವ ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣ ” ಎಂದು ಬರೆದಿರುವ ಡೆತ್ ನೋಟ್ ವೊಂದು ವೈರಲ್ ಆದ ಬಳಿಕ ವಿಪಕ್ಷಗಳು ಸಚಿವರ ವಿರುದ್ದ ಮುಗಿಬಿದ್ದಿದ್ದವು. ಈಶ್ವರಪ್ಪನವರ ರಾಜೀನಾಮೆ ಪಡೆಯುವಂತೆ ಹಾಗೂ ಅವರ ವಿರುದ್ದ ಮರ್ಡರ್ ಪ್ರಕರಣ ದಾಖಲಿಸಿ ಜೈಲಿಗಟ್ಟುವಂತೆ ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು.ಹಾಗೆ ಕುಟುಂಬಸ್ಥರು ಕೂಡ ಆರೋಪ ಮಾಡಿದ್ದರು. ಅದಾದ ಬಳಿಕದ ಬೆಳವಣಿಗೆಯಲ್ಲಿ ಇದೀಗ ಈಶ್ವರಪ್ಪ ವಿರುದ್ದ ಆತ್ಮಹತ್ಯೆಗೆ ಪ್ರಚೋಧನೆ ಎಂಬ ನೆಲೆಯಲ್ಲಿ FIR ದಾಖಲಾಗಿದೆ.
ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ ನೀಡಿದ ದೂರಿನಂತೆ ಸಚಿವ ಈಶ್ವರಪ್ಪ ಹಾಗೂ ಆಪ್ತರಾದ ಬಸವರಾಜ ಮತ್ತು ರಮೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿದ ಉಡುಪಿ ನಗರ ಪೊಲೀಸ್ ಠಾಣೆ ಪೊಲೀಸರು ಇಂದು ಮುಂಜಾನೆ ಐಪಿಸಿ ಕಲಂ:306 ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಕಾರ