ಪಡುಕೋಣೆ: 24-01-2024 ರಂದು ಮಕ್ಕಳ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು. ಜೊತೆ ಕಾರ್ಯದರ್ಶಿ ಫಾ. ಫ್ರಾನ್ಸಿಸ್ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ವಾರ್ಡ್ ಸದಸ್ಯೆ ಜ್ಯೋತಿ, ಪಾಲನಾ ಮಂಡಳಿ ಅಧ್ಯಕ್ಷ ಕೆನಡಿ ಪಿರೇರಾ, ಕಾರ್ಯದರ್ಶಿ ಅಲೆಕ್ಸ್ ಆಂಟನಿ ಡಿಸೋಜ, ಇ.ಸಿ.ಒ. ಯೋಗೀಶ್ , ಸಿ ಆರ್ ಪಿ ರಾಮನಾಥ ಮೇಸ್ತ, ಮುಖ್ಯ ಅತಿಥಿಗಳಾಗಿ ಅನೂಪ್ ಡಿಸಿಲ್ವ – ಪಾವ್ಲ್ ಟೆಕ್ ಪ್ರೊಸೆಸ್ ಬೆಂಗಳೂರು, ಡಾ. ರಾಜೇಶ್ ಬಾಯಿರಿ, ಡಾ. ಅನುಲೇಖ – ಚಿತ್ರಕೂಟ ಆಯುರ್ವೇದ ಆಸ್ಪತ್ರೆ ಆಲೂರು ನಿತಿನ್ ಡಿಆಲ್ಮೇಡ […]
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಇಂಡಸ್ಟ್ರಿಯಲ್ ವಿಸಿಟ್’ ( ಕೈಗಾರಿಕಾ ಕೇಂದ್ರಕ್ಕೆ ಭೇಟಿ) ನ ಅಂಗವಾಗಿ ಉಪ್ಪೂರಿನ ‘ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ‘ ಘಟಕ ಹಾಗೂ ಮಸಾಲೆ ಉತ್ಪನ್ನ ಮತ್ತು ಮಾರಾಟದ ಗೃಹ ಕೈಗಾರಿಕಾ ಕೇಂದ್ರವಾದ ವಕ್ವಾಡಿಯ ‘ಆನೆಗುಡ್ಡೆ ಉಪಾಧ್ಯಾಯ ಇಂಡಸ್ಟ್ರೀಸ್ ‘ ಗೆ ಭೇಟಿಯನ್ನು ಆಯೋಜಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಷ್ಮಾ ಶೆಣೈ ಮತ್ತು ಇತರ ಉಪನ್ಯಾಸಕರು ವಿದ್ಯಾರ್ಥಿಗಳೊಂದಿಗೆ ಕೈಗಾರಿಕಾ […]
ಉಡುಪಿ : ನಿರಂತರ್ ಉದ್ಯಾವರ ನೇತೃತ್ವದಲ್ಲಿ 6ನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವವು ಇದೇ ಫೆಬ್ರವರಿ ಒಂದರಿಂದ ನಾಲ್ಕನೇ ತಾರೀಖಿನವರೆಗೆ ಸಂಜೆ ಗಂಟೆ 6:30ಕ್ಕೆ ಸರಿಯಾಗಿ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸ್ಮಾರಕ ವೇದಿಕೆಯಲ್ಲಿ (ಚರ್ಚ್ ವಠಾರ) ನಡೆಯಲಿದೆ. ಫೆಬ್ರವರಿ 1, ಗುರುವಾರದಂದು ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇವರಿಂದ ಕ್ಲಾನ್ವಿನ್ ಫೆರ್ನಾಂಡಿಸ್ ಇವರ ನಿರ್ದೇಶನದ ರಂಗಗೀತೆಗಳು ಮತ್ತು ‘ಹ್ಯಾಂಗ್ ಆನ್’ (ಕನ್ನಡ), ಫೆಬ್ರವರಿ 2 ಶುಕ್ರವಾರದಂದು ಪ್ರಶಸ್ತಿ ಪುರಸ್ಕೃತ ಸಂಗಮ ಕಲಾವಿದೆರ್ […]
ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆಬ್ರವರಿ 4 ರಂದು ಆದಿತ್ಯವಾರ ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ. ಈ ಕಾರ‍್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು, ಹಾಸ್ಯಗಾರರು ಪ್ರದರ್ಶನ ನೀಡಲಿರುವರು. ಈ ಕಾರ‍್ಯಕ್ರಮವು ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಉಚಿತ ಪ್ರವೇಶದೊಂದಿಗೆ ಏರ್ಪಡಿಸಲಾಗಿದೆ.
ಮಣಿಪಾಲ ಮಾಹೆಯ ಲೈಫ್ ಸಾಯನ್ಸ್ ನಲ್ಲಿ ಒರಲ್ ಕ್ಯಾನ್ಸರ್ ಬಗ್ಗೆ ಪಿ ಎಚ್ ಡಿ ಮಾಡುತ್ತಿರುವ ಕುಂಭಾಸಿಯ ಯು.ಸಂಗೀತಾ ಶೆಣೈ ಯವರಿಗೆ ಗುಜರಾತಿನ ಅಹ್ಮದಾಬಾದ್ ನಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ “ಯಂಗ್ ಸಾಯನ್ಟಿಸ್ಟ್ ಅವಾರ್ಡ್” ಪ್ರದಾನ ಮಾಡಲಾಗಿದೆ. ಇಂಡಿಯನ್ ಸೊಸೈಟಿ ಆಫ್ ಹ್ಯೂಮನ್ ಜೆನೆಟಿಕ್ಸ್ ಹಾಗೂ ಗುಜರಾತ್ ಬಯೊ ಟೆಕ್ನಾಲಜಿ ರಿಸರ್ಚ್ ಸೆಂಟರ್ ಏರ್ಪಡಿಸಿದ ವಾರ್ಷಿಕ ಸಮ್ಮೇಳನ ದಲ್ಲಿ ಯು.ಸಂಗೀತಾ ಶೆಣೈ ತಮ್ಮ ಸಂಶೋಧನಾ ವಿಚಾರಗಳನ್ನು ಪ್ರಾತ್ಯಕ್ಷಿಕೆ ಮೂಲಕ ಮಂಡಿಸಿದ್ದರು. ಇವಳು ಹಿರಿಯ ಪತ್ರಕರ್ತ ಯು.ಎಸ್ ಶೆಣೈ […]
ಕುಂದಾಪುರ: ನಮ್ಮ ದೇಶವನ್ನು ಇನ್ನೂರು ವರ್ಷಗಳ ಕಾಲ ಆಳಿದ ಬ್ರಿಟನ್ ದೇಶದ ಪಾರ್ಲಿಮೆಂಟ್ ಕಟ್ಟಡದ ಮಧ್ಯೆ ಗಾಂಧಿ ಪ್ರತಿಮೆಯನ್ನು ನಿಲ್ಲಿಸಲಾಗಿದೆ. ಎಲ್ಲಿಯ ತನಕ ಗಾಂಧಿ ಅಲ್ಲಿ ಇರುತ್ತಾರೊ ಅಲ್ಲಿಯ ತನಕ ಗಾಂಧಿಗೆ ಸೋಲಿಲ್ಲ. ಗಾಂಧಿಯನ್ನು ಕುಗ್ಗಿಸಲೂ ಸಾಧ್ಯವಿಲ್ಲ. ಗಾಂಧಿ ಇಂದು ನಮಗೆ ಜಗತ್ತಿನ ಆಸ್ತಿಯಾಗಿದ್ದಾರೆ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಚಿಂತಕ ಎಮ್. ದಿನೇಶ್ ಹೆಗ್ಡೆ ಹೇಳಿದರು. ಮಹಾತ್ಮ ಗಾಂಧಿ ಹುತಾತ್ಮ ದಿನದಂದು ಕುಂದಾಪುರದ ಸಮಾನ ಮನಸ್ಕ ಸಂಘಟನೆಗಳಿಂದ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ-66ರ ಬಳಿ […]
The Annual Feast of Infant Mary Church at Bajjodi was celebrated in a grand manner on Sunday January 28th . In the morning. Infant Mary’s statue was taken in a grand procession from OSS convent to the church. Thereafter a solemn Holy Eucharist was celebrated in the Church Msgr. Maxim Noronha was the main celebrant […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾನುವಾರ ನಡೆದ ಸ್ಫೋಟದಲ್ಲಿ ಮೂವರು ಸಾವನಪ್ಪಿದ ದಾರುಣ ಘಟನೆ ನಡೆದಿದೆ. ಸಾವನ್ನಪ್ಪಿದವರ ದೇಹಗಳು ಛಿದ್ರಗೊಂಡಿವೆ, ಸಾವನ್ನಪ್ಪಿದವರು ತ್ರಿಶೂರಿನ ವರ್ಗೀಸ್, ಹಾಸನದ ಚೇತನ್, ಕೇರಳದ ಸ್ವಾಮಿ ಎಂದು ತಿಳಿದು ಬಂದಿದೆ. ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಸುಡುಮದ್ದು […]
ಕುಂದಾಪುರ: ಜನವರಿ 27ರಂದು ಬಳ್ಕೂರು ಗ್ರಾಮದ ಬಳಿ.ರಾಘವ ಉಡುಪ ಮತ್ತು ಶ್ರೀಕಾಂತಿ ಉಡುಪ ಅವರ ಪುತ್ರಿಯರಾದ ಯುಕ್ತಿ ಉಡುಪ ಮತ್ತು ಸುನಿಧಿ ಉಡುಪ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮತ್ತು ಕರ್ನಾಟಕ ಕಲಾಶ್ರೀ ಗುರು ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಮಂಗಳೂರು ಇವರು ಉದ್ಘಾಟಿಸಿ ಶುಭಹಾರೈಸಿದರು.ಇಬ್ಬರೂ ಕಲಾವಿದರ ಗುರು ನೃತ್ಯ ವಸಂತ ನಾಟ್ಯಾಲಯ (ರಿ) ಕುಂದಾಪುರದ ನಿರ್ದೇಶಕರಾದ ವಿದುಷಿ ಶ್ರೀಮತಿ […]