ಉದ್ಯಾವರ : ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ವಿವಿಧ ಸಂಘಟನೆಗಳು ಅವರನ್ನು ಸನ್ಮಾನಿಸಿ, ಅಭಿನಂದಿಸಿದೆ. ಇತ್ತೀಚಿಗೆ ಮುಕ್ತಾಯ ಕಂಡ ನಿರಂತರ್ ಉದ್ಯಾವರ ನೇತೃತ್ವದ ನಿರಂತರ ಬಹುಭಾಷಾ ಸಿನಿಮಾ ಉತ್ಸವದ ಕೊನೆಯ ದಿನ ವo. ಅನಿಲ್ ಡಿಸೋಜಾ ರವರಿಗೆ ನಿರಂತರ್ ಉದ್ಯಾವರ ಸಂಘಟನೆಯ ವತಿಯಿಂದ ಉನ್ನತ ಹುದ್ದೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿ […]
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ರಕ್ಷಕ-ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಭಿಮತ ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ರಕ್ಷಕ-ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ- 2026ರ ಆಗಸ್ಟ್ 8ರಂದು ಗೊನ್ಝಾಗ ಸಭಾಂಗಣದಲ್ಲಿ ಜರಗಿತು. ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಹಾಗೂ ರಕ್ಷಕ-ಶಿಕ್ಷಕರ ಸಂಘದ ಅಧ್ಯಕ್ಷರಾದ ವಂ. ಫಾ. ಬ್ರಾಯೆನ್ ಪಿರೇರಾ ಎಸ್.ಜೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತನಾಡಿ, ಜೆಸ್ವಿಟ್ ಶಿಕ್ಷಣದ ಪ್ರಮುಖ ತತ್ವವಾದ ‘ಕೂರಾ ಪರ್ಸೋನಾಲಿಸ್’ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಪೂರಕ. ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ […]
ಪಡುಕೋಣೆ ;ದಿನಾಂಕ. 8. 8. 26 ಮತ್ತು 9.8.26 ರಂದು ಶನಿವಾರ ಅಪರಾಹ್ನ 4.00 ಘಂಟೆಗೆ ಸರಿಯಾಗಿ ಸೌಪರ್ಣಿಕ ನದಿಯ ತೀರದಲ್ಲಿರುವ ಪಡುಕೋಣೆ ಚರ್ಚಿಗೆ ನೂತನ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾರವರು ತಮ್ಮ ಅಧಿಕ್ರತ ಭೇಟಿ ಮಾಡಿದರು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ! ಪ್ರಾನ್ಸಿಸ್ ಕರ್ನೆಲಿಯೊರವರು ಅವರನ್ನು ಅಲಂಗಿಸಿ ಮಲ್ಲಿಗೆ ಹಾರವನ್ನು ಹಾಕಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು. ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೋಸೆಫ್ ಸಿರಿಲ್ ಡಿ’ಸಿಲ್ವಾರವರು ಹೂ ಗುಚ್ಛವನ್ನು ನೀಡಿದರು. ಯುವತಿಯರು ತಾಂಬೂಲ, ಬೆಲ್ಲ […]
ಉಡುಪಿ: ಜಿಲ್ಲೆಯ ಕಾಪು ಮುದುರ೦ಗಡಿ ಪೇಟಿಯಲ್ಲಿ ಹಾಡಹಗಲೇ ಪಿಸ್ತೂಲಿನಿಂದಡೇವಿಡ್ನನ್ನು ಕೊಲೆಗೈದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೋಲಿಸರು ಸೆರೆ ಹಿಡಿಯುವಲ್ಲಿಯಶವಸ್ವಿಯಾಗಿದ್ದಾರೆ.ಆರೋಪಿಗಳನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾ೦ತರ ಪಿಎಸ್ಐ ಪ್ರಸನ್ನ, ಶಿರ್ವ ಪಿಎಸ್ಐಮಂ೦ಜುನಾಥ್ ಮರಬದ ಹಾಗೂ ಬೈ೦ದೂರು ಪಿಎಸ್ಐ ಮಹೇಶ್ ಅವರ ತ೦ಡವು ಬ೦ಧಿಸಿ ಕರೆತರುತ್ತಿರುವಾಗಬೈ೦ದೂರು ಸಮೀಪ ಪೋಲಿಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿ೦ದ ಶೂಟರ್ ರಾಜು ಕಾಲಿಗೆ ಗು೦ಡು ಹೊಡೆದು ಬ೦ಧಿಸಿದ್ದಾರೆ.ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ […]
ಉಡುಪಿ: ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಉಡುಪಿಯ ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಸಮೀಪ ಮಧ್ಯಾಹ್ನ ಈ ಶೂಟೌಟ್ ನಡೆದಿದ್ದು, ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಒಂದು ಗುಂಡು ಡೇವಿಡ್ ಅವರ ಹಣೆಗೆ ಹೊಕ್ಕಿದ್ದು, ಇನ್ನೆರಡು ಗುಂಡುಗಳು ಕೈಗೆ ತಗುಲಿವೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ […]
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ. ರತ್ನಾ ಅವರು ಆ.6 ರಂದು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಅವರ ಎರಡನೇ ಪುತ್ರಿಯೂ ಕೆಲಸದ ಕಾರಣ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಗೆ ಹಿಂದಿರುಗಿದ ವೇಳೆ, ಕೃತಿ ತನ್ನ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಅವರು ತಮ್ಮ […]
ಕೊಲ್ಲೂರು: ತಾಯಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಬೆಳ್ಳಾಲ ಗ್ರಾಮದ ಗಂಗಮಾತಾ ನಿವಾಸಿ ಚಂದ್ರಾವತಿ ಹಾಗೂ ಪ್ರಭಾಕರ ನಾಯಕ್ ದಂಪತಿಯ ಪುತ್ರಿ ಪ್ರಮಿತಾ (18) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಆ. 6 ರಂದು ಗುರುವಾರ ಬೆಳಗ್ಗೆ ಮನೆಯಲ್ಲಿ ಬಟ್ಟೆಗಳನ್ನು ಇಡುವ ವಿಚಾರವಾಗಿ ಪ್ರಮಿತಾ […]
ಶಿರೂರು: ಜ್ಞಾನದಾ ಶೈಕ್ಷಣಿಕ ಸಂಸ್ಥೆ, ಶಿರೂರಿನಲ್ಲಿ ತುಳುನಾಡಿನ ಸಾಂಪ್ರದಾಯಿಕ ಸಂಸ್ಕೃತಿ, ಆಹಾರ ಪದ್ಧತಿ ಹಾಗೂ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ‘ಆಟಿ ಸಂಭ್ರಮ’ ಕಾರ್ಯಕ್ರಮವನ್ನು ಬುಧವಾರ, 05 ಆಗಸ್ಟ್ 2026 ರಂದು ಸಂಭ್ರಮದಿಂದ ಆಯೋಜಿಸಲಾಯಿತು.ಆಟಿ ತಿಂಗಳು ತುಳುನಾಡಿನ ಜನಜೀವನದಲ್ಲಿ ವಿಶೇಷ ಮಹತ್ವವನ್ನು ಹೊಂದಿದ್ದು, ಈ ತಿಂಗಳಲ್ಲಿ ನಮ್ಮ ಹಿರಿಯರು ಅನುಸರಿಸುತ್ತಿದ್ದ ಸಾಂಪ್ರದಾಯಿಕ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಆಚರಣೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.ಕಾರ್ಯಕ್ರಮದ ಅಂಗವಾಗಿ ವಿವಿಧ ಬಗೆಯ ಸಾಂಪ್ರದಾಯಿಕ ಆಟಿ ಆಹಾರ ಪದಾರ್ಥಗಳನ್ನು […]
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಸಂತ ಆನ್ಸ್ ಪ್ರೌಢಶಾಲೆ, ಬೋಳಾರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2026/2027 ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಚದುರಂಗ ಪಂದ್ಯಾಟದ ಉದ್ಘಾಟನಾ ಸಮಾರಂಭವು ಸಂತ ಆನ್ಸ್ ಪ್ರೌಢಶಾಲೆಯ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಆನ್ಸ್ ಸಮೂಹ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಮಾರಿ ಇವ್ಲಿನ್ […]

