ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ್ದ “ಯುವಜನತೆಯಲ್ಲಿ ಮಾನಸಿಕ ಸ್ವಾಸ್ಥ್ಯ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಉಡುಪಿಯ ಡಾ.ಎ.ವಿ.ಬಾಳಿಗ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಅವರು ಇಂದಿನ ಯುವಜನತೆಯು ಈಗಿನ ಜೀವನಶೈಲಿಯಿಂದಾಗಿ ಬೇಗ ಒತ್ತಡಗಳಿಗೆ ಒಳಗಾಗುತ್ತಾರೆ. ಯುವಜನತೆ ಒತ್ತಡ ನಿರ್ವಹಣೆಯ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ನಿಶಾ ಎಂ. ಪ್ರಾಸ್ತಾವಿಕವಾಗಿ […]
ಕುಂದಾಪುರ ಹೋಬಳಿ ಮಟ್ಟದ ಥ್ರೋಬಾಲ್ ಪಂದ್ಯಾಟವು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರದಲ್ಲಿ ಜರುಗಿತು. ಬಾಲಕರ ವಿಭಾಗದಲ್ಲಿ : ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಪ್ರಥಮ ಸ್ಥಾನ ಪಡೆದರೆ , ವೆಂಕಟರಮಣ ಆಂಗ್ಲಮಾಧ್ಯಮ ಶಾಲೆ ಕುಂದಾಪುರ ಸ್ಥಾನ ಪಡೆಯಿತು ಬಾಲಕಿಯರ ವಿಭಾಗದಲ್ಲಿ: ಸಂತ ಮೇರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ, ಪ್ರಥಮ ಸ್ಥಾನ ಪಡೆದರೆ. ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ. ದ್ವಿತೀಯ ಸ್ಥಾನ ಪಡೆಯಿತು
ಮೂಡುಬೆಳ್ಳೆ: ಸಂತ ಲಾರೆನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ. ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ,ಸಾಮಾಜಿಕ ಅರಣ್ಯ ಇಲಾಖೆ ಉಡುಪಿ ಜಿಲ್ಲೆ ,ಪ್ರಕೃತಿ ಪರಿಸರ ಸಂಘ, ರೋಟರಿ ಕ್ಲಬ್ ಮಣಿಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಲಯ ಉಡುಪಿ ಉಪ ವಲಯ ಅರಣ್ಯಾಧಿಕಾರಿ ರಶ್ಮಿ ಡಿ ,ಅರಣ್ಯ ಪ್ರೇರಕರಾದ ಪ್ರತ್ಯಕ್ಷ ಕಾಮತ್, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುಧಾಕರ ಪೂಜಾರಿ, […]
ಕುಂದಾಪುರ : “ಅತಿಯಾದ ಬೆಳವಣಿಗೆ ನಮ್ಮ ಹಿರಿಯರ ಅಥವಾ ಪೂರ್ವಿಕರು ಬೆಳೆಸಿದ ಪರಿಸರವನ್ನ ನಾವು ಹಾಳು ಮಾಡುತ್ತಿದ್ದೇವೆ. ಈ ಪರಿಸರವನ್ನು ಹಾಳು ಮಾಡಲು ನಮಗೆ ಯಾವುದೇ ಹಕ್ಕಿಲ್ಲಾ ” ಎಂದು ಗುರುಪ್ರಸಾದ್ ಶೆಟ್ಟಿ ಪರಿಸರ ಅಭಿಯುತರರು ಪುರಸಭೆ ಕುಂದಾಪುರ ಇವರು ಹೇಳಿದರು. ಅವರು ಇತ್ತೀಚಿಗೆ ಇಲ್ಲಿನ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪುರಸಭೆ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಪ್ಲಾಸ್ಟಿಕ್ ಮತ್ತು ತ್ಯಾಜ್ಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.ಮಾನವನು ತನ್ನ […]
ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಟೆಬಲ್ ಟೆನಿಸ್ ಟೂರ್ನಾಮೆಂಟ್ ನಡೆಯಿತು.ಅಂತಿಮ ಪಂದ್ಯದಲ್ಲಿ ಹುಡುಗರು ವಿಭಾಗದಲ್ಲಿ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೊದಲ ಸ್ಥಾನ ಪಡೆದು ಚಾಂಪಿಯನ್ ತಂಡವಾಯಿತು. ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ ಕಾಲೇಜು ರನ್ನರ್ ಅಫ್ ಆಗಿ ದ್ವಿತೀಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಪುತ್ತೂರಿನ ವಿವೇಕಾನಂದ ಕಾಲೇಜು ಪಡೆಯಿತು.ಹುಡುಗಿಯರ ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಶಿಪ್ ಪಡೆಯಿತು. ಕಲ್ಯಾಣಪುರದ ಮಿಲಾಗ್ರಿಸ್ […]
ಕುಂದಾಪುರ, ಜು. 22: ಕುಂದಾಪುರ ವಲಯ ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಮತ್ತು ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 21.07.22 ರಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮ ಗುರುಗುರು ವಂ| ಅಶ್ವಿನ್ ಆರಾನ್ಹಾ ವಿದ್ಯಾರ್ಥಿಗಳಿಗಳಿಗೆ ಶುಭ ಕೋರಿದರು. ಮುಖ್ಯ […]
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಬೂಸ್ಟರ್ ಡೋಸು ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜುಲೈ 22 ರಂದು ಆಯೋಜಿಸಲಾಯಿತು. ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ ಬೂಸ್ಟರ್ ಡೋಸ್ ಕೋವಿಡ್ -19 ಲಸಿಕಾಕರಣ […]
ಶಿರೂರು: ಟೋಲ್ ಪ್ರವೇಶ ದ್ವಾರದಲ್ಲಿ ಭೀಕರ ಅಂಬುಲೈನ್ಸ್ ಅಪಘಾತ ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಅಂಬುಲೈನ್ಸ್ ಶರ ವೇಗದಲ್ಲಿ ಬರುತ್ತಿರುವಾಗ ಶಿರೂರು ಟೋಲ್ ಗೇಟಿನ ಸಿಬಂದಿ ಹಾಕಿದ್ದ ಬ್ಯಾರಿಕೇಡ್ ಇಟ್ಟಿದ್ದು, ಅಂಬುಲೈನ್ಸ್ ವೇಗದಿಂದ ಬರುತಿದ್ದ ಅರಿತು ಅದನ್ನು ತ್ವರಿತವಾಗಿ ತೆರವು ಮಾಡಲು ಪ್ರಯತ್ನಿಸುತಿದ್ದ ವೇಳೆ ಅಂಬುಲೈನ್ಸ್ ಚಾಲಕ ವೇಗ ಕಡಿಮೆ ಮಾಡಲು ಪ್ರಯತ್ನಿಸಿದ ವೇಳೆ ಸ್ಕಿಡ್ ಆಗಿ ಸಿಬಂದಿಗೆ ಬಡಿಯಿತು.
ಗ್ರೀನ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ರೋಟರಿ ಕುಂದಾಪುರ ದಕ್ಷಿಣ ದ ಆಶ್ರಯದಲ್ಲಿ ಸಾರ್ವಜನಿಕ ರಿಗೆ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಅಮೂಲ್ಯ ಗಿಡಮೂಲಿಕೆ ಹಾಗೂ ಹಣ್ಣುಗಳ ಸಸಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು , ರೋಟರಿ ಕುಂದಾಪುರ ದಕ್ಷಿಣ ದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕರು ವಹಿಸಿದ್ದರು.ಗ್ರೀನ್ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಮುನಿಯಾಲ್ ಗಣೇಶ್ ಶೆಣೈ ಅಮೂಲ್ಯ ಸಸಿಗಳಿಂದಾಗುವ ಪ್ರಯೋಜನ ವಿವರಿಸಿದರು. ಸಂಸ್ಥೆಯ ವಿಶ್ವಸ್ಥ ಡಾ.ಉತ್ತಮಕುಮಾರ್ ಶೆಟ್ಟಿ ಫಲಾನುಭವಿಗಳ ವಿವರ ನೀಡಿದರು. ಕಾರ್ಯದರ್ಶಿ ಸಚಿನ್ ನಕ್ಕತ್ತಾಯ ವಂದಿಸಿದರು.