ಶಂಕರನಾರಾಯಣ : ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ ಯು ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಧ್ವಜಾರೋಹಣ ಗೈದು ಕನ್ನಡಾಂಭೆಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಲಾಯಿತು ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಧ್ವಜಾರೋಹಣ ಗೈದು ಮಾತನಾಡಿ ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ […]
ಕುಂದಾಪುರ (ನವೆಂಬರ್ 01) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿ ತಾಯಿ ಭುವನೇಶ್ವರಿಯ ಭಾವ ಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಶಿಕ್ಷಕರಾಗಿರುವ ನಾವೆಲ್ಲರೂ ಕನ್ನಡ ಭಾಷೆಯ ಮೇಲೆ ಎಷ್ಟರ ಮಟ್ಟಿಗೆ ಹಿಡಿತವನ್ನು ಹೊಂದಿದ್ದೇವೆ ಎಂಬುದನ್ನು ಅವಲೋಕನ ಮಾಡಿಕೊಳ್ಳಲು ಇವತ್ತಿನ ದಿನ ಎನ್ನುವಂತದ್ದು […]
ಮಂಗಳೂರು; ಬಿಕರ್ನಕಟ್ಟೆಯ ಕಾರ್ಮೆಲ್ ಗುಡ್ಡದ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ಬಿಕರ್ನಕಟ್ಟೆಯ ಸೈಂಟ್ ತೆರೇಸಾ ಆಫ್ ಅವಿಲಾ ಸಮುದಾಯದ ಒಸಿಡಿಎಸ್ ಘಟಕ ಮತ್ತು ಮಂಗಳೂರಿನ ಭಾರತೀಯ ಕ್ಯಾನ್ಸರ್ ಸೊಸೈಟಿಯು ಮಂಗಳೂರಿನ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ 31 ಅಕ್ಟೋಬರ್ 2024 ರಂದು ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಆಯೋಜಿಸಿತ್ತು. OCDS ಸದಸ್ಯರಿಂದ ನೋಂದಣಿ ಪ್ರಾರಂಭವಾಗಿ, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆ.ಫಾ. ಮೆಲ್ವಿನ್ ಡಿ’ಕುನ್ಹಾ, ಒಸಿಡಿ, ಸೈಂಟ್ ಜೋಸೆಫ್ ಮಠದ ಸುಪೀರಿಯರ್, ಬಿಕರ್ನಕಟ್ಟೆ, ಮಂಗಳೂರು. […]
ಕೋಟೆಶ್ವರ,ನ. 1; ಸ್ಥಳೀಯ ಸಂತ ಅಂತೋನಿ ಚರ್ಚಿನಲ್ಲಿ ಸರ್ವಧರ್ಮ ಸಮಿತಿಯ ನೇತೃತ್ವದಲ್ಲಿ ಧರ್ಮಕೇಂದ್ರದ ಸಮುದಾಯ ಮತ್ತು ಆಸುಪಾಸಿನ ಹಿಂದೂ ಬಾಂಧವರೊಂದಿಗೆ ಕೂಡಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧರ್ಮಕೇಂದ್ರದ ಧರ್ಮಗುರು ಫಾ. ಪ್ರವೀಣ್ ಪಿಂಟೋ ‘ದೀಪಾವಳಿ ಬೆಳಕಿನ ಹಬ್ಬ, ಇದು ಕತ್ತಲೆಯ ಮೇಲೆ ಬೆಳಕಿನ ವಿಜಯ ಮತ್ತು ಕೆಟ್ಟದ್ದರ ಮೇಲೆ ಒಳ್ಳೆಯತನವನ್ನು ಸಂಕೇತಿಸುತ್ತದೆ, ಅಂದರೆ ನಮ್ಮ ಹ್ರದಯದೊಳೊಗೆ ಇರುವ ಕತ್ತಲೆ ಮಾಯವಾಗಿ ಬೆಳಕಾಗಬೇಕು, ಈ ದೀಪಾವಳಿ ನಮ್ಮೆಲ್ಲರ ಪ್ರೀತಿ ಭಾಂಧವ್ಯದ ಹಬ್ಬವಾಗಲಿ’ ಎಂದು ಆತ್ಮೀಯ ಸಂದೇಶ […]
ಕುಂದಾಪುರ ಅ.31 ಜಗತ್ತಿನಲ್ಲಿ ಅತಿ ದೊಡ್ಡ ಬಹು ಸಂಸ್ಕೃತಿಯನ್ನು ಒಳಗೊಂಡು , ಏಕತೆಯನ್ನು ಪಸರಿಸುವ ದೇಶ ಭಾರತ. ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ದೃಢ ನಿರ್ಧಾರ ಇತಿಹಾಸದಲ್ಲಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ಮಂಚೂಣಿ ಸ್ಥಾನಕ್ಕೆ ತರುವಂತಾಯಿತು ಎಂದು ನಾಯಕರಾದ ದಿನೇಶ್ ಹೆಗ್ಡೆ ಯವರು ನುಡಿದರು. ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ […]
ಉಡುಪಿ: ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ ಜಾನಪದೀಯ ಸಂಸ್ಕೃತಿಗಳು ವಿಶಿಷ್ಠ ಮತ್ತು ವೈವಿಧ್ಯಮಯಾಗಿದ್ದು ಅದನ್ನು ಉಳಿಸಿ ಪೋಷಿಸುವ ಅಗತ್ಯತೆ ಇದೆ ಎಂದು ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ|ಡೆನಿಸ್ ಡೆಸಾ ಹೇಳಿದರು. ಅವರು ಗುರುವಾರ ತೊಟ್ಟಂ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ಕಥೊಲಿಕ ವಿದ್ಯಾರ್ಥಿ ಸಂಚಾಲನ ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವೈಸಿಎಸ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಪಾಶ್ಚಾತಿಕರಣವಾಗುತ್ತಿರುವ […]
ಬುಧವಾರ ಮಧ್ಯಾಹ್ನ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ವಾಲಿ ಮಗುಚಿ ಬಿದ್ದಿದೆ. ಅದೇ ಸಂದರ್ಭದಲ್ಲಿ ಲಾರಿಯ ಪಕ್ಕದಲ್ಲಿ ಮಹಿಳೆ ಚಲಾಯಿಸುತ್ತಿದ್ದ ಸ್ಕೂಟಿಯೊಂದು ಸಾಗುತ್ತಿತ್ತು ಸ್ಕೂಟಿಯ ಮೇಲೆ ಲಾರಿ ಮಗುಚಿ ಬಿದ್ದು ಲಾರಿಯಲ್ಲಿದ್ದ ಮಣ್ಣಿನ ಅಡಿಯಲ್ಲಿ ಸ್ಕೂಟಿ ಸಮೇತ ಸವಾರೆ ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿಕೊಂಡರು. ಲಾರಿ ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಲಾರಿಯೊಳಗೆ ಸಿಲುಕಿಕೊಂಡಿದ್ದಾನೆ. ಅದೇ ಮಾರ್ಗದಲ್ಲಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ಕೋಡಿ […]
ಕುಂದಾಪುರ,ಸಿದ್ದಾಪುರ; ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂದಿಸಿದ್ದು ಇಬ್ಬರು ಪರಾರಿ ಆಗಿರುತ್ತಾರೆ. ಬಂದಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿ ಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಂಗಪ್ಪ ವಾಲಿ, […]
ಮಂಗಳೂರು, ಅಕ್ಟೋಬರ್ 30: ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಹೆಣ್ಣು ಮಗುವಿನ ಸ್ಥೈರ್ಯ, ಶಕ್ತಿ ಮತ್ತು ಚೈತನ್ಯಕ್ಕಾಗಿ ಅಕ್ಟೋಬರ್ 30 ರಂದು ಬುಧವಾರ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ರಾಜ್ಯ ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಉಪ-ರಿಜಿಸ್ಟ್ರಾರ್ ಅಮ್ಲೈನ್ ಡಿಸೋಜ ಗೌರವ ಅತಿಥಿಯಾಗಿದ್ದರು. “ಕನಸುಗಳನ್ನು ಹೊಂದಿರುವ ಹುಡುಗಿಯರು ದೃಷ್ಟಿ ಹೊಂದಿರುವ ಮಹಿಳೆಯರಾಗುತ್ತಾರೆ ಎಂದು ಹೇಳಲಾಗುತ್ತದೆ. ಅಂತಹ ದೃಷ್ಟಿಕೋನವನ್ನು ಕೈಗೊಳ್ಳಲು ನಾವು ಪರಸ್ಪರ ಶಕ್ತಿಯನ್ನು ನೀಡೋಣ. ”ಹೆಣ್ಣುಮಕ್ಕಳು ಪ್ರೀತಿ ಮತ್ತು ಅವಕಾಶದಿಂದ ಪೋಷಿಸಿದಾಗ ಎಲ್ಲರಿಗೂ ನೆರಳು ನೀಡುವ ಪ್ರಬಲ […]