ಕುಂದಾಪುರ ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ದಿನಾಂಕ 01-08-22 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ” ವ್ಯಸನ ಮುಕ್ತ” ದಿನಾಚರಣೆಯನ್ನಾಗಿ ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಡಾ. ಮಹಾಂತ ಶಿವಯೋಗಿ ಅವರ ಕುರಿತು ಮಾಹಿತಿ ನೀಡಿದರು. ಶಿಕ್ಷಕರಾದ ಮೈಕಲ್ ಇವರು ವ್ಯಸನ ಮುಕ್ತ ಸಮಾಜ ನಿರ್ಮಾಣ ವಿಷಯದ ಕುರಿತು ಮಾತನಾಡಿ ಮಧ್ಯಪಾನ, ಮಾದಕ ದ್ರವ್ಯ ,ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ವ್ಯಸನ […]
ಶಿರ್ವ:ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯಗಳನ್ನು ನಿರ್ವಹಿಸಲು ಕಂಪ್ಯೂಟರ್ಗಳನ್ನು ಬಳಸಲಾಗಿದೆ. ಹೀಗಾಗಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ. ವಿದ್ಯಾರ್ಥಿಗಳು ಕಂಪ್ಯೂಟರ್‌ಗಳ ಸದುಪಯೋಗ ದಿಂದ ಉತ್ತಮ ಉಪಾದಿ ಹಾಗೂ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಇವತ್ತು ಕಂಪ್ಯೂಟರ್ ಒಂದು ಮೂಲಭೂತ ಅಗತ್ಯ ವಸ್ತುವಾಗಿದೆ. ಶಿಕ್ಷಣ ,ಆರೋಗ್ಯ ,ಪ್ರಾಕೃತಿಕ ಹಿನ್ನಲೆಯಲ್ಲಿ ಕರ್ಣಾಟಕ ಬ್ಯಾಂಕ್ ತನ್ನದೇ ಆದ ಕೊಡುಗೆಯನ್ನು ಈ ಸಮಾಜಕ್ಕೆ ನೀಡುತ್ತಾ ಬಂದಿದೆ ಎಂದು ಇಲ್ಲಿನ ಶಿರ್ವ ಸೈಂಟ್ ಮೇರಿಸ್ ಕಾಲೇಜಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಲಾದ 5 […]
ಕುಂದಾಪುರ: ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾತ್ಮಕ ದೃಷ್ಟಿಯಲ್ಲಿ ಭಾಗವಹಿಸುವುದು ಮುಖ್ಯ. ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವಿನಡೆಗೆ ಸಾಗುವಲ್ಲಿ ಸದಾ ಪ್ರಯತ್ನಶೀಲರಾಗಿರಬೇಕು ಎಂದು ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸಂಚಾಲಕ ಅತೀ.ವಂ.ಫಾ. ಸ್ಟ್ಯಾನಿ ತಾವ್ರೋ ಹೇಳಿದರು.ಅವರು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆ-2022 ಹಾಗೂ ವ್ಯಸನ ಮುಕ್ತ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಂದ್ಯಾಟವನ್ನು ಕುಂದಾಪುರ […]
ಕುಂದಾಪುರ ಅಂಕದಕಟ್ಟೆ ನಿವಾಸಿ ಶೀನ ದೇವಾಡಿಗ (82) ಇವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ 31-07-2022ರ ಆದಿತ್ಯವಾರ ನಿಧನರಾದರು. ಮೂಲತಹ:, ಚಾಂತರದವರಾಗಿದ್ದ ಅವರು ಉತ್ತಮ ಕೃಷಿಕರಾಗಿದ್ದು, ಅಂಗಡಿ ವ್ಯಾಪರದಲ್ಲೂ ಗುರುತಿಸಿ ಕೊಂಡಿದ್ದರು. ಶ್ರೀಯುತರು ಪತ್ನಿ, 4 ಗಂಡು, 1 ಹೆಣ್ಣು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಪತ್ನಿ ನಾಗರತ್ನ ಶೆಟ್ಟಿ (80) ಭಾನುವಾರ ಸಂಜೆ ಬಸ್ರೂರಿನ ತಮ್ಮ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಧಾರ್ಮಿಕ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಬಸ್ರೂರು ಹಾಗೂ ಕೊಲ್ಲೂರಿನ ಕೂಡುರಿನ ಪರಿಸರದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು.ಮೃತರಿಗೆ ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರಿದ್ದಾರೆ ಅಂತ್ಯಕ್ರಿಯೆ: ಸೋಮವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಕೂಡುರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಬಸ್ರೂರಿನ ಮನೆಯಲ್ಲಿ ಸಾರ್ವಜನಿಕ […]
ಕೋಟ: ಜಾತಿ ಧರ್ಮವನ್ನು ಮೀರಿ ನಮ್ಮೆಲ್ಲರನ್ನು ಭಾವುಕರಾಗಿ ಬಂಧಿಸಲ್ಪಡುವ ಕುಂದಾಪ್ರ ಕನ್ನಡ ನಮ್ಮೆಲ್ಲರ ಹೆಮ್ಮೆಯ ಭಾಷೆಯಾಗಿದೆ. ಇದನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳ ಕೆಲಸ ಅದ್ವಿತೀಯ ಎಂದು ಕುಂದಾಪುರ ಭಂಡಾರ್‍ಕಾರ್ಸ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕಿ ರೇಖಾ ವಿ.ಬನ್ನಾಡಿ ಹೇಳಿದರುಅವರು ಗುರುವಾರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್‍ಸೈಡ್, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಇವರ ಸಹಯೋಗದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ 4ನೇ ವರ್ಷದ ವಿಶ್ವ ಕುಂದಾಪ್ರ […]
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಕಾಳಾವರ ವರದರಾಜ ಶೆಟ್ಟಿ ಪ್ರಥಮ ದರ್ಜೆ ಕಾಲೇಜು ಇವರ ಸಹಭಾಗಿತ್ವದಲ್ಲಿ ಚರ್ಮ ರೋಗ ತಪಾಸಣೆ ಶೆಭಿರ ಆಯೋಜಿಸಲಾಯಿತು. ಈ ಶಿಬಿರವನ್ನು ಖ್ಯಾತ ಚರ್ಮ ರೋಗ ತಜ್ನ ಡಾ. ಅರುಣ ಶೆಟ್ಟಿ, ಕೊರ್ಗಿ ಇವರು ಉಚಿತ ತಪಾಸಣೆ ನಡೆಸಿದರು ಅಲ್ಲದೇ ಸೋಪ್, ಕ್ರೀಮ್, ಲೋಷನ್ ಮಾತ್ರೆ ಇತ್ಯಾದಿ ಗಳನ್ನು ಉಚಿತವಾಗಿ ನೀಡಿದರು. ಸುಮಾರು 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪ್ರಯೋಜನ ಪಡೆದರು. ಡಾ. ಅರುಣ್ ಶೆಟ್ಟಿ ಕೆ. ಇವರು ಮಕ್ಕಳಿಗೆ […]
ಗಂಗೊಳ್ಳಿ;ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ ಶಾಲಾ ಸಂಸತ್ತನ್ನು ಜುಲೈ- 25 ರಂದು ರಚಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ ದೀಪ ಹಚ್ಚುವುದರ ಮೂಲಕ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ರೆಸೆನ್ಸ್ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಶಾಲಾ ನಾಯಕನಾಗಿ ವೀರೇಶ್ ಖಾರ್ವಿ, ಉಪನಾಯಕಿಯಾಗಿ ಚಂದನಾ, ಪ್ರಮಾಣವಚನ ಬೋಧಿಸಿದರು. ಶಿಕ್ಷಣ ಮಂತ್ರಿಯಾಗಿ ಸೃಷ್ಟಿ, ಕ್ರೀಡಾ ಮಂತ್ರಿಯಾಗಿ ಸಂಜನಾ, ಆಹಾರ ಮಂತ್ರಿಯಾಗಿ ನಮಿತಾ, ಸಾಂಸ್ಕೃತಿಕ ಮಂತ್ರಿಯಾಗಿ ಐಶೂ, ಸ್ವಚ್ಛತಾ ಮಂತ್ರಿಯಾಗಿ ಶಶಿ, ಸಭಾಪತಿಯಾಗಿ ಪ್ರಜ್ಞಾ, ವಿರೋಧ ಪಕ್ಷದ ನಾಯಕಿಯಾಗಿ ಮಾನ್ಯ, […]
ಕುಂದಾಪುರ: ‘ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸದಾ ಕಾರ್ಯಪ್ರವೃತ್ತವಾಗಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಆಶ್ರಯದಲ್ಲಿ ಆರಂಭಗೊಂಡ ಜ್ಯೂನಿಯರ್ ರೆಡ್ ಕ್ರಾಸ್ ಘಟಕವು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆರೋಗ್ಯ ಸಂಬಂಧಿ ತುರ್ತು ಸೇವೆಗಳ ಅರಿವು ಜೊತೆಗೆ ಮಾನವೀಯ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಬೆಳೆಸುವ ಉದ್ದೇಶ ಈ ಸಂಸ್ಥೆ ಹೊಂದಿದೆ ‘ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯವರು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನೂತನವಾಗಿ […]