ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ 39ನೇ ಬ್ಯಾಚ್ ಬಿ.ಎಚ್.ಎಮ್.ಎಸ್ ಕೋರ್ಸ್ ಹಾಗೂ 26 ನೇ ಬ್ಯಾಚ್ ಸ್ನಾತಕೋತ್ತರ ಕೋರ್ಸ್‍ನ್ನು ದಿನಾಂಕ 17.02.2024 ರಂದು ಕಾಲೇಜಿನ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸಲಹೆಗಾರರು ಹಾಗೂ ಪ್ರಾಧ್ಯಾಪಕರು ಮತ್ತು ಕರ್ನಾಟಕ ರಾಜ್ಯ ಚಾಪ್ಟರ್‍ನ ಅಧ್ಯಕ್ಷರಾದ ಡಾ. ಪ್ರವೀಣ್‍ರಾಜ್ ಪಿ.ರವರು ಮುಖ್ಯ ಅತಿಥಿಗಳಾಗಿ ಹಾಗೂ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ಅಧ್ಯಕ್ಷರಾಗಿ, ವೇದಿಕೆಯಲ್ಲಿ ಉಪಸ್ಥಿತರಿದ್ದ ಇತರ […]
ಪ್ರತಿಯೊಂದು ಸಮುದಾಯಕ್ಕೆ ಅವರದ್ದೆ ಆದ ಸಂಸ್ಕೃತಿ ಇರುವಂತೆ ನಮಗೆ ಕೊಂಕಣಿ ಭಾಷಿಕರಿಗೂ ಒಂದು ಸಂಸ್ಕೃತಿ ಇದೆ. ಇದು ತಲೆತಲಾಂತರದಿಂದ ಹರಿದು ಬಂದಿದ್ದು ಪರಿವರ್ತನಾಶೀಲಾ ವಾಗಿದೆ. ಬದಲಾವಣೆ ಪ್ರಕೃತಿ ನಿಯಮ. ಹಾಗಿರುವಾಗ ಸಮಾಜದೊಡಗಿನ ಮಧುರ ಬಾಂಧವ್ಯಕ್ಕಾಗಿ ಸಮಾನತೆಯನ್ನು ಗುರುತಿಸಿಕೊಳ್ಳುವುದು ಅಗತ್ಯ. ಬದಲಾವಣೆಯ ಬಿರುಗಾಳಿಯಲ್ಲಿ ನಮ್ಮ ಸಂಸ್ಕೃತಿ-ಸಂಪ್ರದಾಯದ ಉತ್ತಮ ಅಂಶಗಳನ್ನು ಉಳಿಸಿಕೊಂಡು, ಭಾಷೆ-ನಾಡು-ನುಡಿಯ ಸಂಸ್ಕೃತಿಯ ಬೇರುಗಳೊಂದಿಗೆ ಅಭಿನ್ನವಾಗಿ ಉಳಿಯುವುದು ನಮ್ಮ ಜವಾಬ್ದಾರಿಯಾಗಿದೆ. ಸಾಹಿತಿಗಳು ಇದಕ್ಕೆ ಮಹತ್ತರ ಕೊಡುಗೆ ನೀಡುತ್ತಾರೆ. ತಮ್ಮ ಲೇಖನಿಯಿಂದ ಕೊಂಕಣಿ ಲೇಖಕ ಸಮುದಾಯದಲ್ಲಿ ತಮ್ಮದೇ ಛಾಪನ್ನು ಒತ್ತಿದ […]
ಕುಂದಾಪುರದ ಉದ್ಯಮಿ, “ಅಜಂತಾ ಪ್ರಿಂಟರ್ಸ್” ಮಾಲಕರಾದ ಸಾಮಾಜಿಕ ಧುರೀಣ ಎ. ಅನಂತಕೃಷ್ಣ ಕೊಡ್ಗಿಯವರು (72) ದಿನಾಂಕ 17 ರಂದು ಶನಿವಾರ ಬೆಳಿಗ್ಗೆ ನಿಧನರಾದರು.ಹಿರಿಯ ಸಮಾಜ ಸೇವಕರಾಗಿದ್ದು, ಕುಂದಾಪುರದ ಲಯನ್ಸ್ ಕ್ಲಬ್, ಬೋರ್ಡ್ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ ಮುಂತಾದ ಸಂಘಟನೆಗಳಲ್ಲಿ ಕಾರ್ಯದರ್ಶಿಯಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ಕುಂದಾಪುರ ತಾಲೂಕು ಬಿಜೆಪಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ಈಗ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಕ್ರೀಯಾಶೀಲರಾಗಿದ್ದರು.ತಮ್ಮ ನೇರ ನುಡಿ, ಮಾನವೀಯ ಸಾತ್ವಿಕ ಗುಣಗಳಿಂದ ಸಮಾಜದಲ್ಲಿ […]
ಕುಂದಾಪುರ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ. ಮೂಲತಃ ಮಹಾರಾಷ್ಟ್ರದವರಾದ ರಾಹುಲ್ ಅವರು, ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಸಂಜೆ ಬ್ಯಾಂಕಿನ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆಗೆ ತೆರಳುತ್ತಿದ್ದ ವೇಳೆ ಆರಾಟೆ ಬಸ್ ನಿಲ್ದಾಣದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ […]
ವರದಿ :-ಈಶ್ವರ್ ಸಿ ನಾವುಂದ. ಕುಂದಾಪುರದ ಅರುಣ್ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥರ ಪ್ರೀತಿಯ ಕುವರಿ ಕುಂದಾಪುರದ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವಲಾಸ್ಯ ಮಧ್ಯಸ್ಥಳು ತನ್ನ ಎಳೆಯ ವಯಸ್ಸಿನಲ್ಲಿಯೇ ಮಹತ್ತರವಾದ ಸಾಧನೆಯನ್ನು ಮಾಡಿ ಹಲವರ ಪ್ರಶಂಸೆಗೆ ಪಾತ್ರಲಾಗಿದ್ದಾಳೆ. ಕರಾವಳಿ ಭಾಗದಲ್ಲಿಯ ಹಲವು ಗುರುಗಳಿಂದ ಯೋಗಾಭ್ಯಾಸವನ್ನು ಮಾಡಿರುವುದು ಡಾ. ನವೀನ್ ಕುಮಾರ್, ಕೆ ಆರ್ ವಿಷ್ಣು ಪ್ರಸಾದ್ ಶೆಟ್ಟಿ ರಂಜಿತ್ ಜಿಡಿ ಹಾಗೂ ಶ್ರೀ ಹರಿ ಅಯ್ಯಂಗಾರ್ ರವರ ಅಚ್ಚುಮೆಚ್ಚಿನ ಶಿಷ್ಯರಾಗಿದ್ದಾಳೆ ಯೋಗಭ್ಯಾಸದ […]
ಕುಂದಾಪುರ: ಎಲ್ಲರಿಗೂ ಬದುಕುವ ಹಕ್ಕಿದೆ ಎಂಬುದನ್ನು ಅರಿತಾಗ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬಹುದು ಪ್ರತಿಯೊಬ್ಬ ಮಗುವಿನಲ್ಲಿ ತಮಗೆ ಸಿಗಬೇಕಾದ ಹಕ್ಕುಗಳ ಬಗ್ಗೆ ತಿಳಿಹೇಳಲು ಮಕ್ಕಳ ವಿಶೇಷ ಗ್ರಾಮಸಭೆ ಸಹಕಾರಿ.ಇದನ್ನು ಮಕ್ಕಳ ಹಬ್ಬದಂತೆ ಆಚರಿಸಲಾಗುತ್ತಿದೆ ಎಂದು ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷೀ ಎಚ್.ಎಸ್.ಹೇಳಿದರು. ಅವರು ತಲ್ಲೂರು ಗ್ರಾಮ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಪಂ ಕುಂದಾಪುರ ನೇತೃತ್ವದಲ್ಲಿ ನಮ್ಮ ಭೂಮಿ ಸಿಡಬ್ಲುಸಿ ಸ್ವಯಂಸೇವಾ ಸಂಸ್ಥೆ ಆಶ್ರಯದಲ್ಲಿ ತಲ್ಲೂರಿನ ಶೇಷಕೃಷ್ಣ ಸಭಾಂಗಣದಲ್ಲಿ ಶನಿವಾರ ನಡೆದ ಮಕ್ಕಳ ವಿಶೇಷ ಗ್ರಾಮ ಸಭೆ ‘ಮಕ್ಕಳ […]
ಕುಂದಾಪುರ, ಫೆ.17: ಇತ್ತೀಚೆ ನೆಡೆದ ಕುಂದಾಪುರ ಕಥೊಲಿಕ್ ಸಭಾ ಘಟಕದ ಅಧ್ಯಕ್ಷರಾಗಿ ವಿಲ್ಸನ್ ಡಿಆಲ್ಮೇಡಾ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶಾಂತಿ ಪಿಂಟೊ, ನಿಕಟಪೂರ್ವ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ, ನಿಯೋಜಿತ ಅಧ್ಯಕ್ಷೆಯಾಗಿ ಆಶಾ ಕರ್ವಾಲ್ಲೊ, ಉಪಾಧ್ಯಕ್ಷೆಯಾಗಿ ಡಾ.ಸೋನಿ ಡಿಕೋಸ್ತಾ, ಸಹಕಾರ್ಯದರ್ಶಿಯಾಗಿ ವಿನಯಾ ಡಿಕೋಸ್ತಾ, ಖಜಾಂಚಿಯಾಗಿ ಪ್ರೇಮಾ ಡಿಕುನ್ಹಾ, ಸಹ ಖಜಾಂಚಿಯಾಗಿ ಮಾರ್ಕ್ ಡಿಸೋಜಾ, ಆಮ್ಚೊ ಸಂದೇಶ್ ಪ್ರತಿನಿಧಿಯಾಗಿ ಜೂಲಿಯೆಟ್ ಪಾಯ್ಸ್, ರಾಜಕೀಯ ಸಂಚಾಲಕರಾಗಿ ಮೈಕಲ್ ಗೊನ್ಸಾಲ್ವಿಸ್, ಸರ್ಕಾರಿ ಸವಲತ್ತುಗಳ ಸಂಚಾಲಕರಾಗಿ ವಿನೋದ್ ಕ್ರಾಸ್ಟೊ, ಅಂತರೀಕ ಲೆಕ್ಕ ತಪಾಸಣೆಗಾರರಾಗಿ ಬರ್ನಾಡ್ ಡಿಕೋಸ್ತಾ, […]
ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಫೆಬ್ರವರಿ 15ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಲ್ತೊಡು ಇಲ್ಲಿ ನೆರವೇರಿತು.ಎನ್.ಎಸ್ ಗ್ರೂಪ್ ಮತ್ತು ಯುವ ಮನೀಷ್ ಇದರ ಮಾಲಕರಾದ ಜಯಶೀಲ ಶೆಟ್ಟಿ, ಶಿಬಿರವನ್ನು ಉದ್ಘಾಟಿಸಿ ಶಿಬಿರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶಿಬಿರಕ್ಕೆ ಶುಭಹಾರೈಸಿದರು.ತದನಂತರ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಕಾಲ್ತೊಡು ಗ್ರಾಮಪಂಚಾಯತ್ ವತಿಯಿಂದ ಶಾಲೆಗೆ ನೀಡಿದ ಕುಡಿಯುವ ನೀರಿನ […]
ಕುಂದಾಪುರ, ಫೆ.17 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನಂತರ ಜಿ ಎಸ್ ಟಿ ಸಂಗ್ರಹದಲ್ಲಿ 14% ಹೆಚ್ಚುವರಿ ಯಾಗಿರುವುದು ದೇಶಕ್ಕೆ ಮಾದರಿಯಾಗಿದೆ. ಕರಾವಳಿಯ ಮೀನುಗಾರರ ತುರ್ತು ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಘೋಷಿಸಿರುವುದು, ಮೀನುಗಾರರ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ, ಮಾತ್ರವಲ್ಲದೆ ದುಡಿಯುವ ವರ್ಗದ ಪರ ಸರಕಾರವಿರುವುದು ಸ್ಪಷ್ಟವಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಅನ್ನ ಸುವಿದಾ ಯೋಜನೆಯಿಂದ ಮನೆ ಬಾಗಿಲಿಗೆ ಆಹಾರಧಾನ್ಯ ವಿತರಣೆ, ಹಿರಿಯ ನಾಗರಿಕರಿಗೆ ಸಂದ ಗೌರವವಾಗಿದೆ. ಗೃಹ ಜ್ಯೋತಿ ಯೋಜನೆಯಲ್ಲಿ 10 ಯೂನಿಟ್ ಹೆಚ್ಚುವರಿ ವಿದ್ಯುತ್ ಅನ್ನು […]