ಶ್ರೀನಿವಾಸಪುರ: ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು.ಪಟ್ಟಣದ ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಬುನಾದಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಅನಗತ್ಯವಾಗಿ […]

Read More

ಶ್ರೀನಿವಾಸಪುರ: ಅಧಿಕಾರಿಗಳು ಮುಂಗಾರು ಮಳೆ ಸೃಷ್ಟಿಸಬಹುದಾದ ಅವಾಂತರ ಎದುರಿಸಲು ಸರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಬೇಕು. ಸಂಭವನೀಯ ವಿಪತ್ತಿನ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಕೃಷಿ ಇಲಾಖೆ ಬಿತ್ತನೆಗೆ ಅಗತ್ಯವಾದ ಎಲ್ಲ ಸೌಲಭ್ಯ ಒದಗಿಸಬೇಕು. ಜಾನುವಾರು ಮೇವು ಸಂಗ್ರಹ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಹೇಳಿದರು.ಪಟ್ಟಣದ […]

Read More

ಶ್ರೀನಿವಾಸಪುರ,ಮೇ.26: ಮಾವು ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಮೀಷನ್, ಬಿಳಿ ಚೀಟಿ ಹಾವಳಿ ತಡೆಗಟ್ಟಲು ವಿಶೇಷ ತಂಡ ರಚನೆ ಮಾಡಿ ರೈತರು ಹಾಗೂ ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಕೊಳತೆ ಮಾವು ಸಮೇತ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗ ಹೋರಾಟ ಮಾಡಿ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮಾವಿಗೆ ಪ್ರಸಿದ್ದಿ ಆಗಿರುವ ತಾಲ್ಲೂಕಿನಲ್ಲಿ ಮಾವು ಮಾರುಕಟ್ಟೆಯ ಅಭಿವೃದ್ದಿಗೆ ಆದ್ಯತೆ ನೀಡುವಲ್ಲಿ 40 ವರ್ಷಗಳಿಂದ ರಾಜಕೀಯ ಮಾಡುತ್ತಿರುವ ರೆಡ್ಡಿ ಸ್ವಾಮಿರವರು ಸಂಪೂರ್ಣವಾಗಿ ವಿಪಲವಾಗಿದ್ದಾರೆಂದು ರೈತ ಸಂಘದ ರಾಜ್ಯ […]

Read More

ಶ್ರೀನಿವಾಸಪುರ: ಪಟ್ಟಣದಲ್ಲಿ ಸ್ಥಳೀಯ ಕೆಎಸ್‍ಆರ್‍ಟಿಸಿ ನೌಕರರ ಸಂಘದ ವತಿಯಿಂದ ಗುರುವಾರ ಅಂಬೇಡ್ಕರ್ ದಿನಾಚರಣೆ ಆಚರಿಸಲಾಯಿತು.ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಉದ್ಯಾನದಲ್ಲಿನ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳ್ಳಿ ರಥದಲ್ಲಿ ಅಳವಡಿಸಲಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಸಂಘದ ನೌಕರರು ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿಹಿ ಹಂಚಿ ಜಯಘೋಷ ಮಾಡಿದರು.

Read More

ಶ್ರೀನಿವಾಸಪುರ: ಸರ್ಕಾರ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯದರ್ಶಿ ವೀರಭದ್ರಸ್ವಾಮಿ ಆಗ್ರಹಪಡಿಸಿದರು.ಪಟ್ಟಣದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಘಟನೆ ತಾಲ್ಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆ ಪರಿಣಾಮವಾಗಿ ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಿತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಕಾಯ್ದೆ ಜಾರಿಗೊಳಿಸಿ ವಾಪಸ್ […]

Read More

ರಾಯಲ್ಪಾಡು 1 :ಈ ಚಾರ್ತರ್ಮಾಸದ ಸಮಯದಲ್ಲಿ ಭಕ್ತಿ ಮತ್ತು ತಪಸ್ಸು ಇತರ ತಿಂಗಳುಗಳಲ್ಲಿ ಮಾಡುವುದಕಿಂತ ಹೆಚ್ಚಿನ ಪುಣ್ಯವನ್ನು ಮತ್ತು ಭಕ್ತಿ ಮತ್ತು ತಪಸ್ಸಿನಿಂದ ನಮ್ಮ ಇಂದ್ರಿಯಗಳು ಮತ್ತು ಮನಸ್ಸು ಶುದ್ಧವಾಗುವುದು ಮತ್ತು ಶುದ್ಧವಾದ ಮನಸ್ಸು ಮಾತ್ರ ದೇವರಿಗೆ ಸಂಪರ್ಕ ಹೊಂದುತ್ತದೆ ಎಂದು ಚಾರ್ತಮಾಸ್ಯೆ ಸೇವಾ ಸಮಿತಿಯ ಪ್ರಧಾನ ಸಂಚಾಲಕ ಹಾಗೂ ಆಖಿಲ ಕರ್ನಾಟಕ ಬ್ರಾಹ್ಮಣರ ಸಂಘದ ಮಾಹಾ ಸಭೆಯ ಉಪಾಧ್ಯಕ್ಷ ಬಿ.ಎಸ್.ರಾಘವೇಂದ್ರಭಟ್ ಹೇಳಿದರು.ರಾಯಲ್ಪಾಡಿನ ಮೇಧಾಗುರು ಜ್ಯೋರ್ತಿವಿಜ್ಞಾನ ಕೇಂದ್ರದಲ್ಲಿ ಗುರುವಾರ ಬೆಂಗಳೂರಿನ ಚಾರ್ತಮಾಸ್ಯೆ ಸೇವಾ ಸಮಿತಿ ವತಿಯಿಂದ ಹರಿಹರ […]

Read More

ಕೋಲಾರದ ಮಾಜಿ ಸಂಸದರೂ ಆಗಿದ್ದು ಈಗ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿಯೂ ಅಧಿಕಾರ ವಹಿಸಿಕೊಂಡಿರುವ ಕೆ.ಎಚ್.ಮುನಿಯಪ್ಪ ಅವರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.

Read More

ಕೋಲಾರ,ಮೇ.23: ಸರಳತೆಯ ಸಾಹುಕಾರ, ಅಭಿವೃದ್ಧಿಯ ಹರಿಕಾರ, ನಮ್ಮ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ರವರು ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಕೋಲಾರ ಜಿಲ್ಲೆಯ ನಾಯಕ ಜನಾಂಗದ ಮುಖಂಡರು ಸಚಿವರ ನಿವಾಸದಲ್ಲಿ ಭೇಟಿಯಾಗಿ ಶುಭ ಕೋರಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ನರಸಿಂಹಯ್ಯ, ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಂ.ಬಾಲಗೋವಿಂದ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಭಾ ತಾಲೂಕು ಅಧ್ಯಕ್ಷ ಆನಂದ್‍ಕುಮಾರ್, ಐತರಾಸನಹಳ್ಳಿ ನರಸಿಂಹಯ್ಯ, ಗರುಡನಹಳ್ಳಿ ಬಾಬು, ವಕ್ಕಲೇರಿ ಬಾಬು, ರಾಜ್ಯ ಸಂಘಟನಾ ಕಾರ್ಯದರ್ಶಿ ಬೆಳ್ಳೂರು […]

Read More

ಕೋಲಾರ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯ ಅಬ್ಬರಕ್ಕೆ ಕೋಲಾರ ಜಿಲ್ಲೆಯ ಅಂದಾಜು 3000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದ್ದು , ರೈತರು ಕಂಗಾಲಾಗಿದ್ದಾರೆ . ಅಕಾಲಿಕ ಮಳೆಗೆ ರಾಜ್ಯದಲ್ಲೇ ಅತೀ ಹೆಚ್ಚು ಬೆಳೆ ನಷ್ಟ ಕೋಲಾರ ಜಿಲ್ಲೆಯಲ್ಲಾಗಿದ್ದು , ಅಂದಾಜು 3000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಪೂರ್ವ ಮಳೆ ಅಬ್ಬರ […]

Read More