ಕೋಲಾರ : ರಾಜಕೀಯ ತಂತ್ರಗಾರಿಕೆಯಲ್ಲಿ ಪಳಗಿರುವ ಮಾಜಿ ಕೇಂದ್ರ ಸಚಿವ ಹಾಲಿ ದೇವನಹಳ್ಳಿ ಶಾಸಕ ಕೆ.ಎಚ್. ಮುನಿಯಪ್ಪ ಅವರು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಕೋಲಾರ ಮೂಲಗಳು ತಿಳಿಸಿವೆ . ಸತತ ಏಳು ಬಾರಿ ಕೋಲಾರ ಸಂಸದರಾಗಿ ಆಯ್ಕೆಯಾಗಿದ್ದ ಕೆ.ಎಚ್.ಮುನಿಯಪ್ಪ , ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ಎಐಸಿಸಿ ವರ್ಕಿಂಗ್ ಕಮಿಟಿಯಲ್ಲೂ ಸದಸ್ಯತ್ವ ಪಡೆಯುವ ಮೂಲಕ ಸೋನಿಯಾಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದಾರೆ . ಕಳೆದ ಲೋಕಸಭಾ ಚುನಾವಣೆಯಲ್ಲಿ […]
ಶ್ರೀನಿವಾಸಪುರ 1 : ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ನನ್ನ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ನನ್ನ ಆನಂತ ಕೋಟಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಸೋಮವಾರ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾನು ನನ್ನ ಜೀವನದಲ್ಲಿ ಎಂದಿಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ನಾನು ದಿನದ 24 ಗಂಟೆಗಳಲ್ಲಿಯೂ ನಿಮ್ಮ ಸಂಪರ್ಕದಲ್ಲಿರುತ್ತೇನೆ. ಎಲ್ಲಾ ಸಮುದಾಯದವರ ಕಷ್ಟ ಸುಖಗಳಿಗೆ ಸ್ಪಂದಿಸಿ ಈ ಕ್ಷೇತ್ರದ ಜನರೊಂದಿಗೆ ಉತ್ತಮ ಬಾಂದವ್ಯವನ್ನು ಬೆಳಸಿಕೊಳ್ಳುವ ಜೊತೆಗೆ ಈ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ […]
ಕೋಲಾರ:- ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ದುರಾಡಳಿತ ಕೊನೆಗೊಳಿಸುವ ಜನರ ನಿರ್ಧಾರ ಕೈಗೂಡಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಸಿಎಂ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ದೇವನಹಳ್ಳಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಚ್.ಮುನಿಯಪ್ಪ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕೋಲಾರದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಜಯಭೇರಿ ಬಾರಿಸಿದ ಹಿನ್ನಲೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಸಿಹಿ ತಿನ್ನಿಸಿ ಸನ್ಮಾನಿಸಿ ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ದೇವನಹಳ್ಳಿಯ ಮತದಾರರು ನನ್ನನ್ನು […]
ಶ್ರೀನಿವಾಸಪುರ: ಕೋಲಾರದಿಂದ ಶ್ರೀನಿವಾಸಪುರಕ್ಕೆ ಬಂದ ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಪಟ್ಟಣದ ಹೊರವಲಯದ ವೇಣು ವಿದ್ಯಾಸಂಸ್ಥೆ ಸಮೀಪ ಬರುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಮತದಾರರಿಗೆ ಕೃತಜ್ಞತೆ ಅರ್ಪಿಸಿ ಮಾತನಾಡಿ, ‘ಇದು ನನ್ನ ಗೆಲುವಲ್ಲ. ಸಮಾಜದ ಎಲ್ಲ ವರ್ಗದ ಸ್ವಾಭಿಮಾನಿ ಮತದಾರರ ಗೆಲುವು. ಕ್ಷೇತ್ರದ ಸರ್ವಜನಾಂಗದ ಗೆಲುವು. ಈಗ 144ನೇ ಸೆಕ್ಷನ್ ಜಾರಿಯಲ್ಲಿದೆ. ನಾಲ್ಕೈದು ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಅರ್ಪಿಸಲಾಗುವುದು. ಗಲಾಟೆಗೆ ಆಸ್ಪದ ನೀಡಬಾರದು ಎಂದು […]
ಶ್ರೀನಿವಾಸಪುರ: ಬಿಜೆಪಿ ಸರ್ಕಾರ ಅಕ್ಕಿ ನೀಡುವ ಪ್ರಮಾಣ ಕಡಿಮೆ ಮಾಡುವ ಮೂಲಕ ಬಡವರ ಅನ್ನಕ್ಕೆ ಕಲ್ಲುಹಾಕಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಕೊತ್ತಪೇಟ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಬಡವರ ಕಷ್ಟದ ಅರಿವಿಲ್ಲ. ಹಾಗಾಗಿಯೇ ಬಡವರು ಬಳಸುವ ವಸ್ತುಗಳ ಬೆಲೆ ದುಬಾರಿಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ರೂ.1200 ಆಗಿದೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ ನೀಡುವ ಅಕ್ಕಿ ಪ್ರಮಾಣ […]
ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದಲ್ಲಿ ಗುರುವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಂಚರತ್ನ ಯೋಜನೆ ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನಸಿನ ಕರ್ನಾಟಕ ನಿರ್ಮಾಣ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.ಎಚ್.ಡಿ.ಕುಮಾರಸ್ವಾಮಿ ಅವರು ರೂಪಿಸಿರುವ ಜಲಧಾರೆ ಯೋಜನೆ ನೀರಿನ ಅಭಾವ ಎದುರಿಸುತ್ತಿರುವ ಜಿಲ್ಲೆಗಳ ಜನರ ಪಾಲಿಗೆ ಆಶಾಕಿರಣವಾಗಿದೆ. […]
ಶ್ರೀನಿವಾಸಪುರ: ಮತದಾರರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಜೆಡಿಎಸ್ ಬೆಂಬಲಿಸಬೇಕು. ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜೆ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ರೋಣೂರಿನಲ್ಲಿ ಬುಧವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಬಳಿಕೆ ಮಾತನಾಡಿದ ಅವರು, ಜೆಡಿಎಸ್ನ ಜಲಧಾರೆ ಯೋಜನೆ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಿಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ ವರ್ಗದ ಜನರ […]
ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಹೊಂದಿರುವ ಮತದಾರರು ಬುಧವಾರ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮತಗಟ್ಟೆಗೆ ಮಂಗಳವಾರ ಅಧಿಕ ಸಂಖ್ಯೆಯ ಇಡಿಸಿ ಪಡೆದಿರುವ ಮತದಾರರು ಮತದಾನ ಮಾಡಲು ಬಂದ ಪರಿಣಾಮವಾಗಿ ಬಹಳಷ್ಟು ಮತದಾರರು ಮತದಾನ ಮಾಡಲು ಸಾಧ್ಯವಾಗದೆ ಹಿಂದಿರುಗಬೇಕಾಯಿತು.ಪಟ್ಟಣದಲ್ಲಿ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಹೊಂದಿರುವ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ತಾಲ್ಲೂಕು ಕಚೇರಿ ಹಾಗೂ ಸರ್ಕಾರಿ ಪ್ರಥಮ […]